ಪುತ್ತೂರು:ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.15ರಂದು ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿಯವರು, ಭಾರತ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಬೋಧಿಸಿ, ಸಂವಿಧಾನದ ಮಹತ್ವದ ಬಗ್ಗೆ ವಿವರಿಸಿದರು. ತಾ.ಪಂ ಯೋಜನಾಧಿಕಾರಿ ಸುಕನ್ಯಾ, ಸಹಾಯಕ ನಿರ್ದೇಶಕಿ ಶೈಲಜಾ ಭಟ್, ಹಿಂದುಳಿದ ಕಲ್ಯಾಣ ಇಲಾಖೆಯ ಕಲ್ಯಾಧಿಕಾರಿ ರಾಜ್‌ಗೋಪಾಲ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣ ಹಾಗೂ ತಾ.ಪಂ ಅಧಿಕಾರಿ ಮತ್ತು ಸಿಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.