ಪುತ್ತೂರು: ಪ್ರಜಾಪ್ರಭುತ್ವದ ಆಶಯಗಳ ರಕ್ಷಣೆ,ಆದರ್ಶಗಳನ್ನು ಪಾಲನೆ ಮಾಡುವುದು,ಸದ್ಯದ ವಾಸ್ತವಿಕತೆಯನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಗಣತಂತ್ರ ದೇಶಗಳಲ್ಲಿನ ಜನರಲ್ಲಿ ಜಾಗೃತಿ ಮೂಡಿಸಲು ಈ ದಿನವನ್ನು ಆಚರಣೆ ಮಾಡಲಾಗುತ್ತದೆ.ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚಿತವಾಗಿರುವ ಪ್ರಜಾಪ್ರಭುತ್ವ ಕೇವಲ ಸಾಂವಿಧಾನಿಕ ರಚನೆಯಲ್ಲ, ಅದೊಂದು ಚೈತನ್ಯವಾಗಿದೆ. ಭಾರತದಲ್ಲಿ ಪ್ರಜಾಪ್ರಭುತ್ವವು ಕೇವಲ ಸಂವಿಧಾನದ ಹರಿವುಗಳ ಸಂಗ್ರಹವಾಗಿರದೇ ನಮ್ಮೆಲ್ಲರ ಜೀವನದ ಹರಿವಾಗಿದೆ.
ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತು ಗೌರವಿಸಲು ಪ್ರತಿವರ್ಷ ಸೆ.15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲಾಗುತ್ತಿದೆ. ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಹೇಳಿದರು.
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆಯಲ್ಲಿ ಅವರು ಮಾತನಾಡಿದರು.
ಕಾಲೇಜಿನ ಎಲ್ಲಾ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸಂವಿಧಾನ ಪೀಠಿಕೆಗೆ ಬದ್ಧರಾಗಿ ಸಾಂವಿಧಾನಿಕ ತತ್ವಗಳನ್ನು ಜೀವನ ಮತ್ತು ಕರ್ತವ್ಯದಲ್ಲಿ ಅಳವಡಿಸಿಕೊಳ್ಳುತ್ತೇವೆ ಎಂದು ಪ್ರತಿಜ್ಞೆ ಮಾಡಿದರು.