ಉಪ್ಪಿನಂಗಡಿ ಗ್ರಾ.ಪಂ.ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್‌ರವರಿಗೆ ಕೋಡಿಂಬಾಡಿ ಗ್ರಾ.ಪಂ.ನ ಹೆಚ್ಚುವರಿ ಪ್ರಭಾರ-ರೋಹಿತಾಶ್ವರು ಮತ್ತೆ ಬನ್ನೂರು ಗ್ರಾ.ಪಂ.ಗೆ

0

ಪುತ್ತೂರು:ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅವರಿಗೆ ಕೋಡಿಂಬಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಹಿಸಲಾಗಿದೆ.
ಕೋಡಿಂಬಾಡಿ ಗ್ರಾ.ಪಂ.ಪ್ರಗತಿ ತೀರಾ ಕುಂಠಿತವಾಗಿದ್ದು ಅಭಿವೃದ್ಧಿ ಕಾರ್ಯಗಳಿಗೆ ತುಂಬಾ ತೊಂದರೆಯುಂಟಾಗಿರುವುದರಿಂದ ಹಾಗೂ ಪಂಚಾಯತ್‌ನ ಆಡಳಿತಾತ್ಮಕ ಹಿತದೃಷ್ಟಿಯಿಂದ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಈ ಆದೇಶ ಹೊರಡಿಸಿದ್ದಾರೆ.


ಕೋಡಿಂಬಾಡಿ ಗ್ರಾ.ಪಂ.ನಲ್ಲಿ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-1 ಕಾರ್ಯದರ್ಶಿ ರೋಹಿತಾಶ್ವ ಎಂ.ಎ.ಅವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದಲೇ ಕೇಂದ್ರ ಸ್ಥಾನವಾದ ಬನ್ನೂರು ಗ್ರಾಮ ಪಂಚಾಯತ್‌ನಲ್ಲಿ ಗ್ರೇಡ್-1 ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಲು ಮತ್ತು ಕೋಡಿಂಬಾಡಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಹುದ್ದೆಯ ಪ್ರಭಾರವನ್ನು ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅವರಿಗೆ ಹಸ್ತಾಂತರಿಸಲು ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here