ನಿಡ್ಪಳ್ಳಿ ಗ್ರಾಮ ಪಂಚಾಯತ್ ಜಮಾಬಂದಿ ಸಭೆ

0

ನಿಡ್ಪಳ್ಳಿ; ನಿಡ್ಪಳ್ಳಿ ಗ್ರಾಮ ಪಂಚಾಯತ್ ನ ‍2022-23 ನೇ ಸಾಲಿನ ಜಮಾಬಂದಿ ಸಭೆ ಸೆ.15 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ತಾಲೂಕು ಪಂಚಾಯತ್ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕಿ ಶೈಲಜಾ ಭಟ್ ಜಮಾಬಂದಿ ಅಧಿಕಾರಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.ಸಭೆಯ ನಂತರ 2022-23 ನೇ ಸಾಲಿನ  ಲೆಕ್ಕ ಪತ್ರಗಳ ದಾಖಲೆ ಮತ್ತು ನಿರ್ವಹಿಸಿದ ಆಯ್ದ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಲಾಯಿತು.

 ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್, ಉಪಾಧ್ಯಕ್ಷೆ ಸೀತಾ, ಸದಸ್ಯರಾದ ಬಾಲಚಂದ್ರ. ಕೆ, ತುಳಸಿ, ನಂದಿನಿ ಆರ್.ರೈ, ಗ್ರೆಟಾ ಡಿ’ ಸೋಜಾ, ಸತೀಶ್ ಶೆಟ್ಟಿ, ಅವಿನಾಶ್ ರೈ ಉಪಸ್ಥಿತರಿದ್ದರು.ಪಿಡಿಒ ಸಂದ್ಯಾಲಕ್ಷ್ಮೀ ಸ್ವಾಗತಿಸಿ ಜಮಾ ಖರ್ಚು ಹಾಗೂ ಕಾಮಗಾರಿಗಳ ವರದಿ ವಾಚಿಸಿ ವಂದಿಸಿದರು.ಸಿಬ್ಬಂದಿಗಳಾದ ರೇವತಿ, ಸಂಶೀನಾ, ವಿನೀತ್ ಕುಮಾರ್ ಸಹಕರಿಸಿದರು.ಸಭೆಯಲ್ಲಿ ಸಾರ್ವಜನಿಕರು, ಬೆಟ್ಟಂಪಾಡಿ ಪದವಿ ಕಾಲೇಜಿನ ಸಮಾಜ ಕಾರ್ಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

LEAVE A REPLY

Please enter your comment!
Please enter your name here