




ಸಂವಿಧಾನದ ಮೌಲ್ಯಗಳೇ ಪ್ರಜಾಪ್ರಭುತ್ವದ ಜೀವಾಳ : ಡಾ. ವರದರಾಜ ಚಂದ್ರಗಿರಿ




ಪುತ್ತೂರು: ಸಂವಿಧಾನದ ಮೌಲ್ಯಗಳೇ ಪ್ರಜಾಪ್ರಭುತ್ವದ ಜೀವಾಳ ಇಂದಿನ ಯುವ ಪೀಳಿಗೆ ಸಂವಿಧಾನದ ಮಹತ್ವವನ್ನು ತಿಳಿದುಕೊಳ್ಳುವ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸುವಂತೆ ಡಾ. ವರದರಾಜ ಚಂದ್ರಗಿರಿ ಕರೆ ನೀಡಿದರು.






ಅವರು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆ.15ರಂದು ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಮಾರಣ್ಣ ವಿದ್ಯಾರ್ಥಿಗಳಿಗೆ ಸಂವಿಧಾನದ ಪ್ರಸ್ತಾವನೆಯನ್ನು ಭೋದಿಸಿ ಅದರ ಮಹತ್ವವನ್ನು ವಿವರಿಸಿದರು. ವೇದಿಕೆಯಲ್ಲಿ ಕಾಲೇಜಿನ ಐ. ಕ್ಯೂ. ಎ. ಸಿ ಸಂಚಾಲಕರಾದ ಡಾ. ಕಾಂತೇಶ್ ಎಸ್, ಗ್ರಂಥಪಾಲಕ ರಾಮ ಕೆ ಉಪಸ್ಥಿತರಿದ್ದರು. ಮಂಜುಷಾ ಸ್ವಾಗತಿಸಿ, ಕೃತಿ ಪ್ರಾರ್ಥಿಸಿದರು. ಪ್ರಜ್ಞಾ ನಿರೂಪಿಸಿ ದರ್ಶನ್ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದ ಹಾಜರಿದ್ದರು.








