ನೆಲ್ಯಾಡಿ: ವಿವಿ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

0

ನೆಲ್ಯಾಡಿ: ವಿಶ್ವವಿದ್ಯಾನಿಲಯ ಘಟಕ ಕಾಲೇಜು ನೆಲ್ಯಾಡಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ರಾಜ್ಯಶಾಸ್ತ್ರ ಸಂಘದ ವತಿಯಿಂದ ಸೆ.೧೫ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು.

ಈ ದಿನಾಚರಣೆಯ ಪ್ರಯುಕ್ತ ಸಂವಿಧಾನದ ಪ್ರಸ್ತಾವನೆಯನ್ನು ಪ್ರತಿಜ್ಞಾವಿಧಿಯನ್ನಾಗಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಯಿತು. ಈ ಕಾರ್ಯಕ್ರಮವನ್ನು ಕಾಲೇಜಿನ ರಾಜ್ಯಶಾಸ್ತ್ರದ ಉಪನ್ಯಾಸಕ ಸುರೇಶ್ ಕೆ ಅವರು ನಿರ್ವಹಿಸಿ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಹತ್ವ ಮತ್ತು ಆಶಯಗಳ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡರು. ವಿಶ್ವದಾದ್ಯಂತ ಈ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಬಹುಮುಖ್ಯವಾಗಿ ಇಂದಿನ ಯುವಜನತೆಯು ಪ್ರಸ್ತುತ ಮತ್ತು ಭವಿಷ್ಯದ ಪ್ರಜಾಪ್ರಭುತ್ವದ ಪಾಲಕರಾಗಿದ್ದಾರೆ.ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ, ಉತ್ತೇಜಿಸುವ ಮೂಲಕ ಮುಂದಿನ ಪೀಳಿಗೆಗೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಿ ಸಬಲೀಕರಣಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಸಂವಿಧಾನದ ಮೂಲ ಧ್ಯೇಯ ಆಶಯಗಳಿಗೆ ತಕ್ಕಂತೆ ನಿರ್ವಹಿಸಬೇಕಾದ ಪ್ರಜೆಗಳ ಕರ್ತವ್ಯಗಳನ್ನು ಬೆಳೆಸಿಕೊಳ್ಳುವುದು ನಮ್ಮೆಲ್ಲರ ಬದುಕಿನ ಮುಖ್ಯ ಉದ್ದೇಶವಾಗಬೇಕು ಎಂದರು.

ಈ ಪ್ರತಿಜ್ಞಾವಿಧಿ ಸ್ವೀಕಾರ ಮತ್ತು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿದ್ದರು.

LEAVE A REPLY

Please enter your comment!
Please enter your name here