ಕಡಬ ವಲಯ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟ

0

ರಾಮಕುಂಜ ಆ.ಮಾ.ಪ್ರೌಢಶಾಲಾ ತಂಡ ಬಾಲಕರ ಪ್ರಥಮ

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆ ಇದರ ಜಂಟಿ ಆಶ್ರಯದಲ್ಲಿ ಸೆ.೧೩ರಂದು ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ನಡೆದ ಕಡಬ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ತಂಡವು ಪ್ರಥಮ ಸ್ಥಾನ ಪಡೆದು ಸೆ.21ರಂದು ಉದನೆ ಪ್ರೌಢಶಾಲೆಯಲ್ಲಿ ಜರುಗುವ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.


ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ರಾಘವ್ ಹಾಗೂ ಮೂರ್ತಿಯವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್.ಟಿ, ವ್ಯವಸ್ಥಾಪಕ ರಮೇಶ್ ರೈ ಆರ್.ಬಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಪ್ರೋತ್ಸಾಹಿಸಿದ್ದರು.

LEAVE A REPLY

Please enter your comment!
Please enter your name here