ಪುತ್ತೂರು:ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.ಅರ್ಜಿ ಸಲ್ಲಿಸಲು ಅ.10ರ ಕೊನೆಯ ದಿನಾಂಕವಾಗಿದ್ದು, ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಈ ಅವಕಾಶ ಕಲ್ಪಿಸಲಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆ ತಿಳಿಸಿದೆ.