ಗುಂಡು ಎಸೆತ ಸ್ಪರ್ಧೆ- ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿನಿ ದೃಶಾನ ತೃತೀಯ

0

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿನಿ ದೃಶಾನ ಅವರು ದಕ್ಷಿಣ ಕನ್ನಡ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಕಿರಿಯರ ಕ್ರೀಡಾಕೂಟ-2023ರ 14 ವರ್ದೊಷಳಗಿನ ಬಾಲಕಿಯರ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಬೆಟ್ಟಂಪಾಡಿಯ ಸುರೇಶ ಗೌಡ ಸರಳಿಕಾನ ಮತ್ತು ವಿದ್ಯಾಶ್ರೀ ದಂಪತಿಗಳ ಮಗಳಾದ ಇವರು ಪ್ರಸ್ತುತ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ ೮ರಂದು ಈ ಸ್ಪರ್ಧೆ ಆಯೋಜನೆಗೊಂಡಿತ್ತು. ವಿದ್ಯಾರ್ಥಿನಿಯ ಸಾಧನೆಗೆ ಅಂಬಿಕಾ ವಿದ್ಯಾಲಯದ ಆಡಳಿತ ಮಂಡಳಿ ಹಾಗೂ ಅಧ್ಯಾಪಕ ಅಧ್ಯಾಪಕೇತರ ವೃಂದ ಶುಭಾಶಯ ತಿಳಿಸಿದೆ.

LEAVE A REPLY

Please enter your comment!
Please enter your name here