ಶ್ರೀಮಹಾಗಣಪತಿ ದೇವರಿಗೆ ರಂಗಪೂಜೆ, ಗಣೇಶ ಪ್ರಸಾದ ಅನ್ನಸಂತರ್ಪಣೆ,
ಶಾರದಾ ಆರ್ಟ್ಸ್ ತಂಡದಿಂದ ಕಲ್ಜಿಗದ ಮಾಯ್ಕಾರೆ ಪಂಜುರ್ಲಿ ತುಳು ನಾಟಕ,
ಪುತ್ತೂರು: ಬೆಟ್ಟಂಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ 38ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಕಾರ್ಯಕ್ರಮ ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಸೆ.19 ಮತ್ತು 20ರಂದು ನಡೆಯಲಿದೆ. ಪುತ್ತೂರು ರಾಜೇಶ್ ಭಟ್‌ರವರ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.
ವೈದಿಕ, ಧಾರ್ಮಿಕ ಕಾರ್ಯಕ್ರಮ:
ಸೆ.19ರಂದು ಬೆಳಿಗ್ಗೆ 9ರಿಂದ ಗಣೇಶ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಪ್ರಗತಿಪರ ಕೃಷಿಕ ಕೋನಡ್ಕ ಗಣಪತಿ ಭಟ್ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಗಣಪತಿ ಹೋಮ, ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ಭಜನಾ ಸಂಘದವರಿಂದ ಭಜನೆ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಗಣೇಶ ಪ್ರಸಾದ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 8ರಿಂದ ಶ್ರೀಮಹಾಗಣಪತಿ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ, ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನನಡೆಯಲಿದೆ. ಸೆ.20ರಂದು ಬೆಳಿಗ್ಗೆ 9.30ರಿಂದ ವಿವಿಧ ಭಜನಾ ಮಂಡಳಿಗಳಿಂದ ಭಜನೋತ್ಸವ, ಗಣಪತಿ ಹೋಮ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.
ಸಭಾ ಕಾರ್ಯಕ್ರಮ:
ಸೆ.19ರಂದು ಬೆಳಿಗ್ಗೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಮನಮೋಹನ ರೈ ಚೆಲ್ಯಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತರಾದ ಶ್ರೀಕಾಂತ್ ಶೆಟ್ಟಿ ಕಾರ್ಕಳ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಪಡುಮಲೆ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀನಿವಾಸ ಭಟ್ ಚಂದುಕೂಡ್ಲು, ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಬೆಳಿಯೂರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಚಂದಪ್ಪ ಪೂಜಾರಿ ಕಾಡ್ಲ, ಪುತ್ತೂರು ದ್ವಾರಕಾ ಕನ್‌ಸ್ಟ್ರಕ್ಷನ್‌ನ ಗೋಪಾಲಕೃಷ್ಣ ಭಟ್, ಮಿಸ್ಟಿಕ್ ಲೈಟ್ ಕೌನ್ಸಿಲಿಂಗ್‌ನ ರಾಕೇಶ್ ಪಿ. ಶೆಟ್ಟಿ, ಪುತ್ತೂರು ಪ್ರಾ.ಕೃ.ಪ.ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಚೆಲ್ಯಡ್ಕ, ಬೆಟ್ಟಂಪಾಡಿ ಬ್ಯಾಂಕ್ ಆಫ್ ಬರೋಡಾದ ರಮೇಶ್ ಸುರ್ಯ, ದ.ಕ.ಜೇನು ವ್ಯವಸಾಯ ಸಹಕಾರ ಸಂಘದ ನಿರ್ದೇಶಕ ಮನಮೋಹನ ಅರಂಬ್ಯ, ಪುತ್ತೂರು ಸಂತ ಫಿಲೋಮಿನಾ ಪಿಯು ಕಾಲೇಜು ಉಪನ್ಯಾಸಕ ಸುಪ್ರೀತ್ ಕೆ.ಸಿ. ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮ: ಸೆ.19ರಂದು ಅಪರಾಹ್ನ 2ರಿಂದ ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘದಿಂದ ಯಕ್ಷಗಾನ ತಾಳಮದ್ದಲೆ, ಸಂಜೆ 6.30ರಿಂದ ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ವಿವೇಕ ನೃತ್ಯ ವೈಭವ, ರಾತ್ರಿ ೯ರಿಂದ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದೆರ್ ಮಂಜೇಶ್ವರ ಅಭಿನಯಿಸುವ ಪಾರ್ದನ ಆಧಾರಿತ ತುಳು ಭಕ್ತಿಪ್ರದಾನ ಸಾಮಾಜಿಕ ನಾಟಕ ಕಲ್ಜಿಗದ ಮಾಯ್ಕಾರೆ ಪಂಜುರ್ಲಿ ನಡೆಯಲಿದೆ ಎಂದು ಸಮಿತಿ ಪ್ರಕಟಣೆ ತಿಳಿಸಿದೆ.
ವೈಭವದ ಶೋಭಾಯಾತ್ರೆ, ಕುಣಿತ ಭಜನೆ
ಸೆ.20ರಂದು ಸಂಜೆ 4ರಿಂದ ಶ್ರಿಗಣೇಶ ಸ್ವಾಮಿಯ ವೈಭವದ ಶೋಭಾಯಾತ್ರೆ ನಡೆದು ಚೆಲ್ಯಡ್ಕ ನದಿಯಲ್ಲಿ ವಿಗ್ರಹದ ಜಲಸ್ತಂಭನ ನಡೆಯಲಿದೆ. ಬಳಿಕ ಚೆಲ್ಯಡ್ಕದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಶೋಭಾಯಾತ್ರೆಯಲ್ಲಿ ನಿಡ್ಪಳ್ಳಿ ಶಾಂತದುರ್ಗಾ ಕುಣಿತ ಭಜನಾ ತಂಡ, ಇರ್ದೆ ಶ್ರೀವಿಷ್ಣು ಚಿಣ್ಣರ ಭಜನಾ ತಂಡ, ಕೊಲ್ಯ ಸರ್ವಶಕ್ತಿ ಮಕ್ಕಳ ಕುಣಿತ ಭಜನಾ ತಂಡ, ಪಟ್ಟೆ ಆಲಂತಡ್ಕ ವನಶಾಸ್ತಾರ ಮಕ್ಕಳ ಕುಣಿತ ಭಜನಾ ತಂಡ, ದರ್ಬೆ ಕುಂಞಿಮಲೆ ಸಿದ್ಧಿವಿನಾಯಕ ಭಜನಾ ಸೇವಾ ಟ್ರಸ್ಟ್, ಪಾಣಾಜೆ ದೇವಸ್ಯ ರಣಮಂಗಲ ಶ್ರೀಸುಬ್ರಹ್ಮಣ್ಯ ಕುಣಿತ ಭಜನಾ ತಂಡ, ಬೆಟ್ಟಂಪಾಡಿ ವಿನಾಯಕ ನಗರ ಶ್ರೀಸಿದ್ಧಿವಿನಾಯಕ ಕುಣಿತ ಭಜನಾ ತಂಡಗಳಿಂದ ಕುಣಿತ ಭಜನೆ ನಡೆಯಲಿದೆ.