ಸೆ .19 :ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಗಣೇಶೋತ್ಸವ

0

ಕಾವು:ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾವು ಇದರ ವತಿಯಿಂದ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ಅರ್ಚಕರಾದ ವೇದಮೂರ್ತಿ ಶಿವಪ್ರಸಾದ್ ಕಡಮಣ್ಣಾಯ ಇವರ ಪೌರೋಹಿತ್ಯದಲ್ಲಿ 40 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಸೆ 19 ರಂದು ನಡೆಯಲಿದೆ.

ಬೆಳಿಗ್ಗೆ 7 ಗಂಟೆಗೆ ಶ್ರೀ ಗಣೇಶ ವಿಗ್ರಹ ಪ್ರತಿಷ್ಠೆ ನಡೆಯಲಿದೆ,ಬೆಳಿಗ್ಗೆ ಗಂಟೆ 8 ಕ್ಕೆ ಭಗವಧ್ವಜಾರೋಹಣ ನಡೆದು ನಂತರ ಗಣಹೋಮ, ಭಜನ ಸೇವೆ ಕಾರ್ಯಕ್ರಮ ಹಾಗೂ ಮಧ್ಯಾಹ್ನ ಗಂಟೆ 12 ಕ್ಕೆ ಮಹಾಪೂಜೆ ನಡೆದು ನಂತರ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ವಹಿಸಿದ್ದು, ಮುಖ್ಯ ಭಾಷಣಗಾರರಾಗಿ ದಕ್ಷಿಣ ಕನ್ನಡ ಜಿಲ್ಲಾ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಯೋಗ ಶಿಕ್ಷಣ ಸಂಯೋಜಕರಾದ ಚಂದ್ರಶೇಖರ ದೇಲಂಪಾಡಿ ಭಾಗವಹಿಸಿದ್ದು,ಮುಖ್ಯ ಅತಿಥಿಗಳಾಗಿ ಕಾವು ಶ್ರೀ ಪಂಚಲಿಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ರಾವ್ ನಿಧಿಮುಂಡ ಉಪಸ್ಥಿತರಾಗಳಿದ್ದಾರೆ.ಸಭಾಕಾರ್ಯಕ್ರಮದ ನಂತರ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ.ಅಪರಾಹ್ನ ಸಂಜೆ ಗಂಟೆ 3 ಕ್ಕೆ ಭಗವಾಧ್ವಜಾವರೋಹಣ ನಡೆದು ನಂತರ ಶ್ರೀ ವಿನಾಯಕನ ಆಕರ್ಷಕ ಶೋಭಾಯಾತ್ರೆ ಹೊರಟು ಆಮ್ಚಿನಡ್ಕ ಸೀರೆ ಹೊಳೆಯಲ್ಲಿ ವಿಗ್ರಹ ಜಲಸ್ಥoಭನ ನಡೆಯಲಿದೆ,ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಸಮಿತಿ ಅಧ್ಯಕ್ಷರಾದ ನವೀನ್ ನನ್ಯ ಪಟ್ಟಾಜೆ ,ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here