ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ – ಬಾಲಕ ವಿಭಾಗದಲ್ಲಿ ಬಂಟ್ವಾಳ ಹಾಗೂ ಬಾಲಕಿಯರ ವಿಭಾಗದಲ್ಲಿ ಪುತ್ತೂರು ವಿಭಾಗ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ದ.ಕ.ಜಿ.ಪಂ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರ ಕಚೇರಿ(ಆಡಳಿತ) ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇದರ ಆಶ್ರಯದಲ್ಲಿ ಪ್ರೋ. ಕಬಡ್ಡಿ ಮಾದರಿಯ ದ.ಕ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ  ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟವು ಸೆ.16ರಂದು ದರ್ಬೆ ಲಿಟ್ಲ್ ಫ್ಲವರ್ ಶಾಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾಟದಲ್ಲಿಬಾಲಕರ ವಿಭಾಗದಲ್ಲಿ ಬಂಟ್ವಾಳ ತಾಲೂಕು ಮತ್ತು ಬಾಲಕಿಯರ ಪುತ್ತೂರು ತಾಲೂಕು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.
ದ.ಕ ಜಿಲ್ಲೆಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ತಲಾ ಏಳು ತಂಡಗಳು ಭಾಗವಹಿಸಿದ್ದು ಬಾಲಕರ ವಿಭಾಗದಲ್ಲಿ ಬಂಟ್ವಾಳ ತಾಲೂಕಿನ ಶ್ರೀರಾಮ ಪ್ರೌಢ ಶಾಲೆ ಕಲ್ಲಡ್ಕ ಹಾಗೂ ಬಾಲಕಿಯರ ವಿಭಾಗದಲ್ಲಿ ಪುತ್ತೂರಿನ ಲಿಟ್ಲ್ ಫ್ಲವರ್ ಶಾಲಾ ತಂಡವು ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.
ಬಾಲಕರ ವಿಭಾಗದಲ್ಲಿ ಕಡಬ ಸಂತ ಆನ್ಸ್ ಶಾಲೆ ಹಾಗೂ ಬಾಲಕಿಯರ ವಿಭಾಗದಲ್ಲಿ ಮಂಗಳೂರು ಉತ್ತರ ಮುಲ್ಕಿ ವ್ಯಾಸ ಮಹರ್ಷಿ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

LEAVE A REPLY

Please enter your comment!
Please enter your name here