ಮಾದಕ ದ್ರವ್ಯ ಸೇವನೆ: ಪೊಲೀಸರಿಂದ ದಸ್ತಗಿರಿ

0

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ 34ನೇ ನೆಕ್ಕಿಲಾಡಿಯ ಬಸ್ ತಂಗುದಾಣದ ಬಳಿ ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕವಾಗಿ ಅನುಚಿತವಾಗಿ ವರ್ತಿಸುತ್ತಿದ್ದ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ನಿವಾಸಿ ವೆಂಕಟೇಶ್ (32) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಅನುಚಿತ ವರ್ತನೆಯ ಬಗ್ಗೆ ಸಾರ್ವಜನಿಕರ ದೂರು ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ವಿಚಾರಿಸಿದಾಗ ತಾನು ಗಾಂಜಾ ಸೇವಿಸಿರುವುದನ್ನು ಆರೋಪಿಯು ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಇಲಾಖಾತ್ಮಕ ಕ್ರಮವನ್ನು ಕೈಗೊಂಡ ಪೊಲೀಸರು ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

LEAVE A REPLY

Please enter your comment!
Please enter your name here