ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ.17ರಂದು ಸಂಘದ ಸಭಾಂಗಣದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ವಹಿಸಿದರು. ವೇದಿಕೆಯಲ್ಲಿ ಸಂಘದ ನಿರ್ದೇಶಕರುಗಳಾದ ಉದಯ ರೈ ಮಾದೋಡಿ, ಮಹಾಬಲ ಶೆಟ್ಟಿ ಕೊಮ್ಮಂಡ, ತಿಮ್ಮಪ್ಪ ಗೌಡ ಮುಂಡಾಳ, ಚೇತನ್ ಕುಮಾರ್ ಕೊಡಿಬೈಲು, ಸೋಮನಾಥ ಕನ್ಯಾಮಂಗಲ, ತನಿಯಪ್ಪ ನಾಯ್ಕ ಕಾರ್ಲಾಡಿ, ವೇದಾವತಿ ಕೆಡೆಂಜಿ, ನಿರ್ಮಲಾ ಕೇಶವ ಅಮೈ, ಪ್ರಕಾಶ್ ರೈ ಸಾರಕರೆರವರುಗಳು ಉಪಸ್ಥಿತರಿದ್ದರು. ಉಪಾಧ್ಯಕ್ಷ ತಾರಾನಾಥ ಕಾಯರ್ಗ ಸ್ವಾಗತಿಸಿ, ಉಪ ಕಾರ್ಯನಿರ್ವಹಣಾಧಿಕಾರಿ ಜಲಜಾ ಎಚ್ ರೈ ವರದಿ ವಾಚಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪಿ. ಕಾರ್ಯಕ್ರಮ ನಿರೂಪಿಸಿದರು.
©