ವಿಶ್ವಕರ್ಮ ಪೂಜಾ ಮಹೋತ್ಸವ – ದೇವರ ಅಲಂಕೃತ ವಾಹನದ ಮೆರವಣಿಗೆ

0

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಚಾಲನೆ ನೀಡಿದ ಕೇಶವಪ್ರಸಾದ್ ಮುಳಿಯ

ಪುತ್ತೂರು: ಬೊಳುವಾರು ವಿಶ್ವಕರ್ಮ ಯುವ ಸಮಾಜ ಹಾಗೂ ವಿಶ್ವ ಬ್ರಾಹ್ಮಣ ಸಂಘದ ಜಂಟಿ ಆಶ್ರಯದಲ್ಲಿ ನಡೆಯುವ ವಿಶ್ವಕರ್ಮ ಪೂಜಾ ಮಹೋತ್ಸವದ ಪ್ರಯುಕ್ತ ವಿಶ್ವಕರ್ಮ ದೇವರ ಅಲಂಕೃತ ವಾಹನ ಮೆರವಣಿಗೆ ಸೆ.17ರಂದು ನಡೆಯಿತು.


ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಬೊಳುವಾರು ವಿಶ್ವಕರ್ಮ ಸಭಾಭವನದ ವರೆಗೆ ನಡೆದ ಮೆರವಣಿಗೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ವಿಶ್ವಕರ್ಮ ದೇವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಕಲಶ ಹೊತ್ತ ಮಹಿಳೆಯರು ಮುಂದೆ ಸಾಗುತ್ತಿದ್ದಂತೆ ಹಿಂದಿನಿಂದ ಚೆಂಡೆ , ತೆರೆದ ಜೀಪಿನಲ್ಲಿ ಗಾಯತ್ರಿ ಮಂತ್ರ ಘೋಷ, ನೃತ್ಯ ಭಜನೆ, ಭವ್ಯ ಸುಂದರ ಅಲಂಕೃತ ರಥದಲ್ಲಿ ಶ್ರೀ ವಿಶ್ವಕರ್ಮ ದೇವರ ಪ್ರತಿಮೆ ಮತ್ತು ವಿಶ್ವಕರ್ಮ ಸಮಾಜದ ಬಂಧುಗಳು ಮೆರವಣಿಗೆಯುದಕ್ಕೂ ಬೊಳುವಾರು ಶ್ರೀ ವಿಶ್ವಕರ್ಮ ಸಭಾಭವನದ ತನಕ ಕಾಲ್ನಡಿಗೆಯಲ್ಲಿ ತೆರಳಿದರು.

LEAVE A REPLY

Please enter your comment!
Please enter your name here