ಕಡಬ ವಲಯ ಮಟ್ಟದ ಪ್ರಾಥಮಿಕ ಶಾಲಾ ತ್ರೋಬಾಲ್ ಪಂದ್ಯಾಟ-ರಾಮಕುಂಜ ಆ.ಮಾ.ಬಾಲಕರ ತಂಡ ದ್ವಿತೀಯ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ದ.ಜಿ.ಪಂ.ಹಿ.ಪ್ರಾಥಮಿಕ ಶಾಲೆ ಮೊಗೆರಡ್ಕ ಇದರ ಆಶ್ರಯದಲ್ಲಿ ಸೆ.12ರಂದು ನಡೆದ ಕಡಬ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.


ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ರಾಘವ್ ಹಾಗೂ ಮೂರ್ತಿ ಅವರು ತರಬೇತಿ ನೀಡಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್.ಟಿ, ಸಂಸ್ಥೆಯ ವ್ಯವಸ್ಥಾಪಕ ರಮೇಶ್ ರೈ ಆರ್.ಬಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here