ಕಡಬ : ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ

0

ಕಡಬ : ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಆರೋಪಿ ಕಡಬ ತಾಲೂಕು ಕೊಣಾಜೆ ಗ್ರಾಮದ ಗುಜ್ಜಟ್ಟೆ ಕದ್ಯ ನಿವಾಸಿ ಭುವನೇಶ್ವರ ಚಂದ್ರ ಎಂಬಾತನನ್ನು ಮೇಲಾಧಿಕಾರಿಗಳ ಆದೇಶದಂತೆ ಕಡಬ ಠಾಣಾ ಕಾನೂನು ಮತ್ತು ಸುವ್ಯವಸ್ಥೆ ಪಿ.ಎಸೈ ಅಭಿನಂದನ್ ಮತ್ತು ತನಿಖಾ ಪಿ.ಎಸೈ ಅಕ್ಷಯ್ ಡವಗಿ ಅವರ ಮಾರ್ಗದರ್ಶನದಂತೆ ಕಡಬ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಭವಿತ್‌ರಾಜ್ ,ವಿನೋದ್ ಅವರು ಮಂಗಳೂರಿನ ಸೆಂಟ್ರಲ್ ರೈಲ್ವೇ ಸ್ಟೇಷನ್ ಬಳಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು , ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here