ವಿದ್ಯಾಭಾರತಿ ಕ್ರೀಡಾಕೂಟ: ರಾಮಕುಂಜ ಆ.ಮಾ.ಶಾಲಾ ತಂಡ ಡಿವಿಜನ್ ಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಪುತ್ತೂರು ನೆಹರುನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಶುವರ್ಗ, ಬಾಲವರ್ಗ ಹಾಗೂ ಕಿಶೋರ ವರ್ಗದ ಬಾಲಕರು ಭಾಗವಹಿಸಿ, ಶ್ರೀ ಮಾಧವ ವಿದ್ಯಾಲಯ ಕೆರೆಗೋಡು, ಮಂಡ್ಯ ಇಲ್ಲಿ ನಡೆಯುವ ಡಿವಿಜನ್ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಶಿಶುವರ್ಗದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಹಾಗೂ ಕಿಶೋರ ವರ್ಗದ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನವನ್ನು ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ತಂಡ ಪಡೆದುಕೊಂಡಿದೆ. ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ರಾಘವ್ ಹಾಗೂ ಮೂರ್ತಿಯವರು ತರಬೇತಿ ನೀಡಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್.ಟಿ, ವ್ಯವಸ್ಥಾಪಕ ರಮೇಶ್ ರೈ ಆರ್.ಬಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here