ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ದ.ಕ.ಜಿ.ಪ.ಹಿ.ಪ್ರಾಥಮಿಕ ಶಾಲೆ ನೆಕ್ಕಿಲಾಡಿ ಇದರ ಜಂಟಿ ಆಶ್ರಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ರಾಘವ್ ಹಾಗೂ ಮೂರ್ತಿಯವರು ತರಬೇತಿ ನೀಡಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್.ಟಿ, ವ್ಯವಸ್ಥಾಪಕ ರಮೇಶ್ ರೈ ಆರ್.ಬಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದರು.
Home ಇತ್ತೀಚಿನ ಸುದ್ದಿಗಳು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ/ಬಾಲಕಿಯರ ಖೋ ಖೋ ಪಂದ್ಯಾಟ-ರಾಮಕುಂಜ ಆ.ಮಾ.ಶಾಲಾ ಬಾಲಕರ ತಂಡ ದ್ವಿತೀಯ