ಕೆಯ್ಯೂರು: ಕೇಸರಿ ಫ್ರೆಂಡ್ಸ್ ಸಂತೋಷ್ ನಗರ 10ನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮ

0

ಕೆಯ್ಯೂರು: ಸಾರ್ವಜನಿಕ ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೇಸರಿ ಫ್ರೆಂಡ್ಸ್ ಸಂತೋಷ್ ನಗರ ಇದರ ಆಶ್ರಯದಲ್ಲಿ 10ನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮವು ಸೆ.20ರಂದು ಸಂತೋಷ್ ನಗರ ವಠಾರದಲ್ಲಿ ನಡೆಯಲಿದೆ.

ಸಂಜೆ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಕೆಯ್ಯೂರು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಶಿಧರ ರಾವ್ ಬೊಳಿಕಲ ವಹಿಸಲಿದ್ದಾರೆ. ದಿಕ್ಸೂಚಿ ಭಾಷಣವನ್ನು ರವೀಂದ್ರ ರೈ ದಕ್ಷ ಕನ್ ಸ್ಟ್ರಕ್ಷನ್ ಅಧ್ಯಕ್ಷರು ವಿವೇಕಾನಂದ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ, ಮುಖ್ಯ ಅತಿಥಿಗಳಾಗಿ ದ.ಕ.ಹಾಲು ಒಕ್ಕೂಟ ಮಂಗಳೂರು ಉಪಾಧ್ಯಕ್ಷರಾದ ಎಸ್.ಬಿ.ಜಯರಾಮ ರೈ ಬಳಜ್ಜ, ಕೆಯ್ಯೂರು ಗ್ರಾ.ಪಂ.ಅಧ್ಯಕ್ಷ ಶರತ್ ಕುಮಾರ್ ಮಾಡಾವು, ಉಪಾಧ್ಯಾಕ್ಷೆ ಸುಮಿತ್ರಾ ದಿವಾಕರ ಪೂಜಾರಿ ಪಲ್ಲತ್ತಡ್ಕ, ಕೆಯ್ಯೂರು ಗ್ರಾ.ಪಂ.ಮಾಜಿ ಅಧ್ಯಕ್ಷೆ ಜಯಂತಿ ಭಂಡಾರಿ ಮಾಡಾವು, ನಿವೃತ್ತ ಬಿಎಸ್ಎನ್ಎಲ್ ಅಧಿಕಾರಿ ಬಾಲಕೃಷ್ಣ ರೈ ಮಾಡಾವು, ಉಪಸ್ಥಿತರಿರುವರು.

ಸಾಂಸ್ಕೃತಿಕ ಕಾರ್ಯಕ್ರಮ
ಸಂಜೆ 6.30ಕ್ಕೆ ಶ್ರೀ ದುರ್ಗಾ ಕೆಯ್ಯೂರು ನೃತ್ಯ ತಂಡ ಇವರಿಂದ ವೈವಿದ್ಯಮಯ ನೃತ್ಯ ರೂಪಕ, ರಾತ್ರಿ 9 ಗಂಟೆಗೆ ಮ್ಯುಸಿಕಲ್ ನೈಟ್ ವಿತ್ ಯೂತ್ ಮೆಲೋಡಿಯಸ್ ಕುಡ್ಲ ಮತ್ತು ಡಾನ್ಸ್ ಕರ್ನಾಟಕ ಡಾನ್ಸ್ ಖ್ಯಾತಿಯ ಸುಷ್ಮಾ.ಜೆ.ಶೆಟ್ಟಿ ಬಳಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿರುವುದು ಎಂದು ಕೇಸರಿ ಫ್ರೆಂಡ್ಸ್ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here