ಸರಕಾರಿ ಸಭೆ-ಸಮಾರಂಭಗಳಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಾಟಲ್ ನೀರು ಬಳಕೆ ನಿಷೇಧ

0

ಬೆಂಗಳೂರು: ರಾಜ್ಯಾದ್ಯಂತ ಸರಕಾರಿ ಹಾಗೂ ಸರಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲಿನ ನೀರಿನ ಬಳಕೆ, ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸುತ್ತೋಲೆ ಹೊರಡಿಸಿದ್ದಾರೆ.


2018ರಲ್ಲಿಯೆ ಈ ಸಂಬಂಧ ಆದೇಶ ಹೊರಡಿಸಲಾಗಿತ್ತು.ಸರಕಾರಿ ಸಭೆ, ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮ ವಹಿಸುವಂತೆ ಸೂಚಿಸಲಾಗಿತ್ತು.ಆದರೆ, ಇತ್ತೀಚಿನ ದಿನಗಳಲ್ಲಿ ಸರಕಾರದ ವತಿಯಿಂದ ಅಥವಾ ಸರಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿವಿಗಳು ಹಾಗೂ ಸರಕಾರದಿಂದ ಅನುದಾನ ಪಡೆಯುವಂತಹ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ, ಸಮಾರಂಭಗಳಲ್ಲಿ ಈ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಸರಕಾರಿ ಸಭೆ, ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ವಿತರಿಸುತ್ತಿರುವುದು ಸಮರ್ಥನೀಯವಲ್ಲ. ಈ ಹಿನ್ನೆಲೆಯಲ್ಲಿ ಸರಕಾರದ ಆದೇಶದಲ್ಲಿ ನೀಡಲಾಗಿದ್ದ ಸೂಚನೆಗಳನ್ನು ಪುನರುಚ್ಚರಿಸುತ್ತ ಇನ್ನು ಮುಂದೆ ಎಲ್ಲ ಸಭೆ, ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ನಲ್ಲಿ ನೀರಿನ ಬಳಕೆ, ಸರಬರಾಜು ಮಾಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here