ದರ್ಬೆತ್ತಡ್ಕದಲ್ಲಿ ಕಳವಿಗೆ ಯತ್ನ – ಆರೋಪಿಗಳು ಪೊಲೀಸ್ ವಶ

0

ಪುತ್ತೂರು: ದರ್ಬೆತ್ತಡ್ಕ ಕುಕ್ಕುತ್ತಡಿ ಗರಡಿಯಲ್ಲಿ ಕಳವಿಗೆ ಯತ್ನಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡದುಕೊಂಡಿರುವ ಘಟನೆ ಸೆ.19ರಂದು ನಡೆದಿರುವ ಬಗ್ಗೆ ವರದಿಯಾಗಿದೆ.

ಕಳ್ಳರು ಗರಡಿಯಲ್ಲಿ ಕಳವಿಗೆ ಯತ್ನಿಸುತ್ತಿದ್ದ ವೇಳೆ ಸಾರ್ವಜನಿಕರು ನೀಡಿದ್ದ ಮಾಹಿತಿಯಾಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕಳ್ಳರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಹಿಂದೆ ನಿಡ್ಪಳ್ಳಿ ಶಾಂತದುರ್ಗಾ ದೇವಸ್ಥಾನದ ಕಾಣಿಕೆ ಡಬ್ಬಿಯಿಂದಲೂ ಇವರೇ ಕಳ್ಳತನ ಮಾಡಿರುವ ಸಾಧ್ಯತೆ ಇರುವುದಾಗಿ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

LEAVE A REPLY

Please enter your comment!
Please enter your name here