ಕಾಣಿಯೂರಿನಲ್ಲಿ 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ಧಾರ್ಮಿಕ ಸಭೆ

0

ಕಾಣಿಯೂರು: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಮರ್ಪಣ ಭಾವದಿಂದ ತೊಡಗಿಸಿಕೊಂಡಾಗ ನಮ್ಮ ಧರ್ಮ ಮತ್ತು ಸಂಸ್ಕೃತಿ ಉಳಿಯಲು ಸಾಧ್ಯ, ಧಾರ್ಮಿಕ ಆಚರಣೆಯ ಮೂಲಕ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಹೆಚ್ಚು ತೊಡಗಿಸಿಕೊಂಡಾಗ ಮನಸ್ಸಿಗೆ ನೆಮ್ಮದಿ ದೊರಕುತ್ತದೆ ಎಂದು ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಹೇಳಿದರು.

ಅವರು ಸೆ 19 ರಂದು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಕಾಣಿಯೂರು ಇದರ ಆಶ್ರಯದಲ್ಲಿ ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದಲ್ಲಿ ನಡೆದ 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಣಿಯೂರು ಗ್ರಾ.ಪಂ.ಅಧ್ಯಕ್ಷ ವಿಶ್ವನಾಥ ಕೊಪ್ಪ, ಬೆಳಂದೂರು ಗ್ರಾ.ಪಂ.ಅಧ್ಯಕ್ಷೆ ಪಾರ್ವತಿ ಮರಕ್ಕಡ, ಕಾಣಿಯೂರು ರಾಶಿ ಕಾಂಪ್ಲೆಕ್ಸ್ ಮಾಲಕ ಚಂದ್ರಶೇಖರ್ ಬರೆಪ್ಪಾಡಿ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಮೀಜೆ, ಭಜನಾ ಮಂಡಳಿ ಅಧ್ಯಕ್ಷ ವಾಸುದೇವ ನಾಯ್ಕ್ ತೋಟ, ಕೋಶಾಧಿಕಾರಿ ಲಕ್ಷ್ಮಣ ಗೌಡ ಮುಗರಂಜ ಉಪಸ್ಥಿತರಿದ್ದರು. ಭಜನಾ ಮಂಡಳೀಯ ಕಾರ್ಯದರ್ಶಿ ಜಯಂತ ಅಬೀರ ವಾರ್ಷಿಕ ವರದಿ ಮಂಡಿಸಿದರು. ಕಾನೂನು ಸಲಹೆಗಾರ ರಾಧಾಕೃಷ್ಣ ಸಾರಿತ್ತಡಿ ಗಣೇಶೋತ್ಸವದ ಪ್ರಯುಕ್ತ ನಡೆದ ಸ್ಪರ್ಧೆಗಳ ವಿಜೇತರಾದ ಹೆಸರನ್ನು ಓದಿದರು. ಮಾಜಿ ಅಧ್ಯಕ್ಷ ಪರಮೇಶ್ವರ ಅನಿಲ ಸ್ವಾಗತಿಸಿದರು. ಸದಸ್ಯ ಸುರೇಶ್ ಓಡಬಾಯಿ ವಂದಿಸಿದರು. ಸದಸ್ಯ ಬಾಬು ಮಾದೋಡಿ ಕಾರ್ಯಕ್ರಮ ನಿರೂಪಿಸಿದರು.


ಪ್ರತಿಭಾ ಪುರಸ್ಕಾರ, ಸನ್ಮಾನ: ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದಲ್ಲಿ ಕಳೆದ ಎಸ್‌ಎಸ್‌ಎಲ್‌ಸಿಯಲ್ಲಿ ಪ್ರಥಮ ಸ್ಥಾನ ಪಡೆದ ಶ್ರೀವಿದ್ಯಾ ಎನ್ ಹಾಗೂ ದ್ವಿತೀಯ ಸ್ಥಾನ ಪಡೆದ ಭವಿಷ್ಯಾ ಅನ್ಯಾಡಿ ಮತ್ತು ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಪ್ರಥಮ ಸ್ಥಾನ ಪಡೆದ ಕಿಶನ್ ಓಡಬಾಯಿ ಹಾಗೂ ದ್ವಿತೀಯ ಸ್ಥಾನ ಪಡೆದ ವರ್ಷ ಕುಮಾರಿ ಅವರಿಗೆ ಪ್ರತಿಭಾ ಪುರಸ್ಕಾರ, ಕಳೆದ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಉತ್ತಮ್ ಜಿ ಕಾಣಿಯೂರು ಹಾಗೂ ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮ: ಸೆ 19ರಂದು ಬೆಳಿಗ್ಗೆ ಮಹಾಗಣಪತಿ ಪ್ರತಿಷ್ಠೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಶ್ರೀ ಲಕ್ಷ್ಮೀಪ್ರಿಯ ಮಹಿಳಾ ಭಜನಾ ಮಂಡಳಿ ಬೆಳಂದೂರು ವಲಯ, ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಹಾಗೂ ಕೊಯಿಲ ಸಬಳೂರು ಶ್ರೀರಾಮ ಮಹಿಳಾ ಮತ್ತು ಮಕ್ಕಳ ಕುಣಿತ ಭಜನಾ ತಂಡದವರಿಂದ ದ ಕುಣಿತ ಭಜನೆ, ನಡೆಯಿತು. ಸೆ 20ರಂದು ಮಹಾಪೂಜೆ, ಪ್ರಸಾದ ವಿತರಣೆ, ಕಾಣಿಯೂರು ಶ್ರೀ ವಿಷ್ಣುಪ್ರಿಯ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ಅನ್ನಸಂತರ್ಪಣೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ ಮಾತನಾಡಿ, ಭಜನಾ ಮಂಡಳಿಯ ಸದಸ್ಯರ ಸಹಕಾರದಿಂದ ಅಭಿವೃದ್ಧಿಹೊಂದುತ್ತಿದ್ದು, ಮುಂದಿನ ವರುಷ ಭಜನಾ ಮಂಡಳಿಯು ಸುವರ್ಣಮಹೋತ್ಸವವನ್ನು ಆಚರಿಸಲಿದೆ. ಈ ಸಂದರ್ಭದಲ್ಲಿ ಎಲ್ಲರ ಸಲಹೆ ಸೂಚನೆಗಳಿಂದ ಸಂಸ್ಥೆಯ ಅಭಿವೃದ್ಧಿಯಲ್ಲಿ ಕೈಸೋಡಿಸಬೇಕು ಎಂದರು.

LEAVE A REPLY

Please enter your comment!
Please enter your name here