ಸವಣೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಸವಣೂರು ವಿನಾಯಕ ಸಭಾಭವನದಲ್ಲಿ ನಡೆಯುತ್ತಿರುವ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಸೆ.20ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಸುಳ್ಯ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ ,ಸವಣೂರು ಗ್ರಾ.ಪಂ.ಮಾಜಿ ಅಧ್ಯಕ್ಷೆ ರಾಜೀವಿ ಶೆಟ್ಟಿ , ಸವಣೂರು ಸಿಎ ಬ್ಯಾಂಕ್ ಉಪಾಧ್ಯಕ್ಷ ತಾರಾನಾಥ ಕಾಯರ್ಗ ,ಗ್ರಾ.ಪಂ.ಸದಸ್ಯರಾದ ಚಂದ್ರಾವತಿ ಸುಣ್ಣಾಜೆ ,ಮಾಜಿ ಸದಸ್ಯ ಸತೀಶ್ ಬಲ್ಯಾಯ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶಿವರಾಮ ಗೌಡ ಮೆದು, ಕಾರ್ಯದರ್ಶಿ ಸುಧಾಕರ ರೈ ದೇವಸ್ಯ, ಕೋಶಾಧಿಕಾರಿ ರಾಮಕೃಷ್ಣ ಪ್ರಭು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.