ನಿಡ್ಪಳ್ಳಿ ದೇವಸ್ಥಾನದ ಕಾಣಿಕೆ ಡಬ್ಬಿಯಿಂದ ಕಳವು ಪ್ರಕರಣದ ಆರೋಪಿ ಬಂಧನ

0

ಪುತ್ತೂರು: ನಿಡ್ಪಳ್ಳಿ ಗ್ರಾಮದ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿಯಿಂದ ನಗದು ಕಳವು ನಡೆಸಿದ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ.
ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದ ಕಾಣಿಕೆ ಡಬ್ಬಿಯನ್ನು ಒಡೆದು ನಗದು ಕಳವು ಮಾಡಿದ ಘಟನೆ ಬಗ್ಗೆ ಸೆ.13ರಂದು ಬೆಳಿಗ್ಗೆ ಬೆಳಕಿಗೆ ಬಂದಿತ್ತು.ಘಟನೆ ಕುರಿತು ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸೆ.20ರಂದು ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿ ಅಪ್ರಾಪ್ತ ವಯಸ್ಕ ಎಂದು ಪೊಲೀಸರು ತಿಳಿಸಿದ್ದಾರೆ.
ದರ್ಬೆತ್ತಡ್ಕ ಕುಕ್ಕುತ್ತಡಿ ಗರಡಿಯಲ್ಲಿ ಕಳವಿಗೆ ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಿಡ್ಪಳ್ಳಿಯ ದೇವಸ್ಥಾನದಲ್ಲೂ ಕಳವು ಮಾಡಿರುವ ವಿಚಾರ ಬಾಯಿ ಬಿಟ್ಟಿದ್ದ ಎನ್ನಲಾಗಿದೆ.

LEAVE A REPLY

Please enter your comment!
Please enter your name here