ವಿಟ್ಲ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಇದರ ಸಂಯುಕ್ತ ಆಶ್ರಯದಲ್ಲಿ ವಿಟ್ಲ ವಲಯ ಮಟ್ಟದ ಪ್ರತಿಭಾ ಕಾರಂಜಿ 2023-24 ರ ಉದ್ಘಾಟನಾ ಕಾರ್ಯಕ್ರಮ ಜರಗಿತು.ವಿಠ್ಠಲ್ ಜೇಸಿಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀಧರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಜಗತ್ತಿನ ಶ್ರೇಷ್ಠ ನಿಧಿ ಮಾನವನ ವ್ಯಕ್ತಿತ್ವದಲ್ಲಿ ಅಡಗಿದೆ, ಒಳ್ಳೆಯ ವ್ಯಕ್ತಿತ್ವ ನಿರ್ಮಾಣಕ್ಕೆ ಪ್ರತಿಭಾ ಕಾರಂಜಿ ಸ್ಫೂರ್ತಿಯಾಗಲೆಂದು ಶುಭಹಾರೈಸಿದರು.
ವಿಠಲ್ ಜೇಸೀಸ್ ಶಾಲಾ ನಿವೃತ್ತ ಉಪಾಪ್ರಾಂಶುಪಾಲೆ, ಪ್ರಸ್ತುತ ಸಾಲೆತ್ತೂರಿನ ಸಿರಿ ವಿದ್ಯಾಲಯದ ಪ್ರಾಂಶುಪಾಲೆ ಶಾಲಿನಿ ನೋಂಡಾರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ವಿಟ್ಲ ವಲಯದ ಶಿಕ್ಷಣ ಸಂಯೋಜಕಿ ಸುಧಾ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ, ಸಂಸ್ಥೆಯ ಹಿರಿಯ ನಿರ್ದೇಶಕ ಮೋನಪ್ಪ ಶೆಟ್ಟಿ, ಸಂಸ್ಥೆಯ ನಿರ್ದೇಶಕ ವಿಜಯ ಪಾಯಿಸ್, ಬಂಟ್ವಾಳ ತಾಲೂಕು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕಿರಣಕುಮಾರ್, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಪುಷ್ಪಾವತಿ, ಚಂದ್ರಶೇಖರ, ಬಿಂದು, ಜ್ಯೋತಿ, ಆಡಳಿತಾಧಿಕಾರಿ ರಾಧಾಕೃಷ್ಣ, ಉಪಪ್ರಾಂಶುಪಾಲೆ ಜ್ಯೋತಿ ಶೆಣೈ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲ ಜಯರಾಮ ರೈ ಸ್ವಾಗತಿಸಿದರು. ವಿಟ್ಲ ವಲಯ
ಸಮೂಹ ಸಂಪನ್ಮೂಲ ವ್ಯಕ್ತಿ ಬಿಂದು ವಂದಿಸಿದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸಹ ಶಿಕ್ಷಕಿ ಸವಿತ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಗೀತಾ ಕೆ, ನಯನಾಕ್ಷಿ, ಅಪರ್ಣ ಸಹಕರಿಸಿದರು.