ಪುತ್ತೂರು: ಸಂಪ್ಯ ನವಚೇತನಾ ಯುವಕ ಮಂಡಲದ ವತಿಯಿಂದ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳ ಕಾಲ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದಿಂದ ನಡೆದ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.20ರಂದು ವೈಭವದ ಶೋಭಾಯಾತ್ರೆಯ, ಗಣೇಶ ವಿಗ್ರಹದ ಜಲಸ್ಥಂಭನದೊಂದಿಗೆ ಸಂಪನ್ನಗೊಂಡಿತು.
ವೇ.ಮೂ ಸಂದೀಪ್ ಕಾರಂತರವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವದಲ್ಲಿ ಬೆಳಿಗ್ಗೆ ಸೆ.20ರಂದು ಬೆಳಿಗ್ಗೆ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, ಧೀ:ಶಕ್ತಿ ಮಹಿಳಾ ಯಕ್ಷಬಳಗ ತೆಂಕಿಲ ಇವರಿಂದ ಜಾಂಬವತಿ ಕಲ್ಯಾಣ ಎಂಬ ಯಕ್ಷಗಾನ ತಾಳಮದ್ದಳೆ, ಮಧ್ಯಾಹ್ನ ಮಹಾಪೂಹೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆದು ಅಪರಾಹ್ನ ಶ್ರೀ ದೇವರ ವೈಭವದ ಶೋಭಾಯಾತ್ರೆ ನಡೆಯಲಿದ್ದು ಶೊಭಾಯತ್ರೆಯು ದೇವಸ್ಥಾನದಿಂದ ಹೊರಟು ಮುಕ್ರಂಪಾಡಿ, ಮೊಟ್ಟೆತ್ತಡ್ಕಕ್ಕೆ ತೆರಳಿ ನಂತರ ಸಂಪ್ಯಕ್ಕೆ ಹಿಂತಿರುಗಿ ಸಂಪ್ಯ ಕೆರೆಯಲ್ಲಿ ಗಣೇಶನ ವಿಗ್ರಹ ಜಲಸ್ಥಂಬನದೊಂದಿಗೆ 41ನೇ ವರ್ಷದ ಗಣೇಶೋತ್ಸವವು ಸಂಪನ್ನಗೊಂಡಿತು. ನವಚೇತನಾ ಯುವಕ ಮಂಡಲದ ಅಧ್ಯಕ್ಷ ವಿಜಯ ಬಿ.ಎಸ್., ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಕಾರ್ಯದರ್ಶಿ ಉಮೇಶ್ ಎಸ್.ಕೆ. ಉಪಾಧ್ಯಕ್ಷ ಮಂಜಪ್ಪ ಗೌಡ, ಕೋಶಾಧಿಕಾರಿ ಜಯಕರ ಬೈಲಾಡಿ, ಜತೆ ಕಾರ್ಯದರ್ಶಿ ಜಯಂತ ಶೆಟ್ಟಿ ಸೇರಿದಂತೆ ನೂರಾರು ಮಂದಿ ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದರು.