ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

0

ಪುತ್ತೂರು: ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ಹಿಂದಿ ದಿವಸ್ ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಾಂಶುಪಾಲ ರಂಝಿ ಮೊಹಮ್ಮದ್ ಅವರು ಹಿಂದಿ ಭಾಷೆ ಮತ್ತು ಹಿಂದಿ ದಿವಸದ ಸಂದೇಶ ನೀಡಿದರು. ಅರೇಬಿಕ್ ವಿಭಾಗದ ಮುಖ್ಯಸ್ಥರಶೀದ್ ಸಖಾಫಿ ಉಪಸ್ಥಿತರಿದ್ದರು. ಹಿಂದಿ ಭಾಷೆಯ ಮಹತ್ವವನ್ನು ತಿಳಿಸುವ ಅಂಗವಾಗಿ ಮಕ್ಕಳಿಗೆ ಹಿಂದಿ ಭಾಷೆಯಲ್ಲಿ ಭಾಷಣ, ಪ್ರಬಂಧ, ಚಿತ್ರಕಲೆ ಮತ್ತು ಶಾಯರಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು. ಶಾಲಾ ಹಿಂದಿ ವಿಭಾಗದ ಶಿಕ್ಷಕ ಇಮ್ತಿಯಾಝ್ ಸಿ.ಎಂ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಕುಮಾರಿ ಫಾತಿಮತ್ ಅಮೀರ ಸ್ವಾಗತಿಸಿದರು. ಶಿಕ್ಷಕಿ ರಂಜಿತಾ ಕೆ.ವಿ ವಂದಿಸಿದರು. ಎಲ್ಲಾ ಬೋಧಕ ಮತ್ತು ಬೋಧಕೇತರ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here