ಸೆ.23: ನರಿಮೊಗರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0

ಪುತ್ತೂರು:ಪುರುಷರಕಟ್ಟೆ ಶಿವಕೃಪ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನರಿಮೊಗರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.23 ರಂದು ಅಪರಾಹ್ನ ನರಿಮೊಗರು ಸಹಕಾರಿ ಬ್ಯಾಂಕಿನ ಸಭಾಭವನದಲ್ಲಿ ಜರಗಲಿದೆ.
ನರಿಮೊಗರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ವಿಜಯಕುಮಾರ್ ಸೊರಕೆಯವರು ಮಹಾಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಹಾಗೂ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರು ಭಾಗವಹಿಸಲಿದ್ದಾರೆ ಎಂದು ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಶನ್ ಎಂ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here