ಪುತ್ತೂರು: ಪಾಲ್ತಾಡು ಹಾಲು ಉತ್ಪಾದಕರ ಸಹಕಾರ ಸಂಘದ 2022-23ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.23ರಂದು ಸಂಜೆ 4 ಗಂಟೆಗೆ ಮಣಿಕ್ಕಾರ ಪ್ರೌಢಶಾಲಾ ವಠಾರದಲ್ಲಿ ನಡೆಯಲಿದೆ.
ಸಹಕಾರ ಸಂಘದ ಅಧ್ಯಕ್ಷ ಪಿ.ವಿನೋದ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯುವ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂಘದ ಬೆಳವಣಿಗೆಗೆ ವಿವಿಧ ಸಲಹೆ ಸೂಚನೆಗಳನ್ನು ನೀಡುವಂತೆ ಸಂಘದ ಕಾರ್ಯದರ್ಶಿ ಮೋಹನ ಗೌಡ ಬಿ. ತಿಳಿಸಿದ್ದಾರೆ.