ಹಿರೆಬಂಡಾಡಿ ಪ್ರೌಢಶಾಲೆಯಲ್ಲಿ ಪುತ್ತೂರು ಶೈಕ್ಷಣಿಕ ವಲಯದ ತಾಲೂಕು ಮಟ್ಟದ ಕ್ರೀಡಾಕೂಟ-ಪೂರ್ವ ಸಿದ್ಧತಾ ಸಭೆ

0

ಹಿರೆಬಂಡಾಡಿ: ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕರ ಮತ್ತು ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವು ಅ.26 ಮತ್ತು 27ರಂದು ಹಿರೇಬಂಡಾಡಿ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದ್ದು, ಇದರ ಪೂರ್ವ ಸಿದ್ಧತಾ ಸಭೆ ಹಿರೆಬಂಡಾಡಿ ಗ್ರಾ.ಪಂ.ಅಧ್ಯಕ್ಷ ಸದಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಹಿರೆಬಂಡಾಡಿ ಸರಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು.


ಎರಡು ದಿನಗಳಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ೬ ವಿಭಾಗಗಳಲ್ಲಿ ೭೨ ಸ್ಪರ್ಧೆಗಳು ನಡೆಯಲಿದ್ದು, ಸುಮಾರು ೧೫೦೦ ಕ್ರೀಡಾಪಟುಗಳು ಭಾಗವಹಿಸಲಿದ್ದು, ಇವರಿಗೆ ಒದಗಿಸಬೇಕಾದ ಮೂಲಭೂತ ಸೌಕರ್ಯಗಳ ಬಗ್ಗೆ ಮುಖ್ಯ ಶಿಕ್ಷಕರಾದ ಹರಿಕಿರಣ್ ಕೆ ಇವರು ಮಾಹಿತಿ ನೀಡಿ, ಈವರೆಗಿನ ಪ್ರಗತಿ ಬಗ್ಗೆ ತಿಳಿಸಿದರು. ಆರ್ಥಿಕ ಸಮಿತಿಯ ಅಧ್ಯಕ್ಷ ರವೀಂದ್ರ ಶೆಟ್ಟಿ ದರ್ಬೆಯವರು ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೆ ಯೋಜನೆಯನ್ನು ಮಂಡಿಸಿದರು. ಆರು ತಂಡಗಳನ್ನು ರಚಿಸಿ, ಪ್ರತಿ ತಂಡಕ್ಕೆ ಸಂಚಾಲಕರಾಗಿ ಸತೀಶ ಶೆಟ್ಟಿ ಹೆನ್ನಾಳ, ಹಮ್ಮಬ್ಬ ಶೌಕತ್ ಆಲಿ, ಲಕ್ಷ್ಮೀಶ ನಿಡ್ಡೆಂಕಿ, ದಯಾನಂದ ಸರೋಳಿ, ರವೀಂದ್ರ ಪಟಾರ್ತಿ ಹಾಗೂ ಆನಂದ ಗೌಡ ವಳಕಡಮ ಇವರನ್ನು ನೇಮಿಸಲಾಯಿತು.


ಸ್ವಾಗತ ಸಮಿತಿಯ ಅಧ್ಯಕ್ಷರಾದ ನಿಕಟಪೂರ್ವ ಶಾಸಕರಾದ ಸಂಜೀವ ಮಠಂದೂರುರವರು ವಿವಿಧ ಸಮಿತಿಗಳ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ, ಕ್ರೀಡಾಕೂಟ ಯಶಸ್ವಿಯಾಗಿ ನಡೆಸಲು ಸಾಕಷ್ಟು ಪೂರ್ವ ಸಿದ್ಧತೆಗಳನ್ನು ಮಾಡಬೇಕೆಂದರು. ದೈಹಿಕ ಶಿಕ್ಷಣ ಶಿಕ್ಷಕರಾದ ಸೀತಾರಾಮ ಗೌಡ ಬಿ.,ರವರು ಕ್ರೀಡಾಕೂಟಕ್ಕೆ ಬೇಕಾಗುವ ಅವಶ್ಯಕತೆಗಳನ್ನು ತಿಳಿಸಿ ಅವುಗಳನ್ನು ಹೊಂದಿಸಿಕೊಳ್ಳಲು ಸರ್ವರೂ ಸಹಕಾರ ನೀಡಬೇಕು ಎಂದು ತಿಳಿಸಿದರು.


ಹಿರೆಬಂಡಾಡಿ ಗ್ರಾ.ಪಂ.ಉಪಾಧ್ಯಕ್ಷೆ ಶಾಂಭವಿ, ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಸತೀಶ್ ಶೆಟ್ಟಿ ಹೆನ್ನಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಶ್ರೀಧರ ಮಠಂದೂರು, ನಿತ್ಯಾನಂದ ಶೆಟ್ಟಿ ದರ್ಬೆ, ಸುಬ್ರಾಯ ಪನ್ನೊಟ್ಟು, ಬಾಲಚಂದ್ರ ಗುಂಡ್ಯ, ಲೋಕೇಶ ಪಾಲೆತ್ತಡಿ, ಭವಾನಿ, ವಾರಿಜಾಕ್ಷಿ, ಹೇಮಂತ್, ನಿತಿನ್ ತಾರಿತ್ತಡಿ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here