ಕುಂಜೂರು ದುರ್ಗಾಪರಮೇಶ್ವರಿ ದೇವಸ್ಥಾನದ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ತಾಲೂಕಿನ ಐತಿಹಾಸಿಕ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಆರ್ಯಾಪು ಗ್ರಾಮದ ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅ.15 ರಿಂದ 23 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆಯು ಸೆ.22 ರಂದು ಶ್ರೀಕ್ಷೇತ್ರದಲ್ಲಿ‌ ಬಿಡುಗಡೆಗೊಂಡಿತು.
ಮಧ್ಯಾಹ್ನ ದೇವಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಆಮಂತ್ರಣ ಬಿಡುಗಡೆಗೊಳಿಸಲಾಯಿತು. ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರುಗಳು, ವಿಶ್ವ ಯುವಕ ವೃಂದದ ಸದಸ್ಯರುಗಳು, ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರುಗಳು, ನವರಾತ್ರಿ ಸೇವಾಕರ್ತರು, ಶಾಶ್ವತ ಸೇವಾಕರ್ತರು ಸೇರಿದಂತೆ ಅನೇಕ ಭಗವದ್ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here