ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ತಾಲ್ಲೂಕು ಪಂಚಾಯತ್ ಪುತ್ತೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ನಗರ ಸಭೆ ಪುತ್ತೂರು, ತಾಲ್ಲೂಕು ಯುವಜನ ಒಕ್ಕೂಟ ಪುತ್ತೂರು, ಶ್ರೀ ಕೃಷ್ಣ ಯುವಕ ಮಂಡಲ ಪಟ್ಟೆ, ವಾಲಿ ಫ್ರೆಂಡ್ಸ್ ಪಟ್ಟೆ ಇದರ ಸಹಯೋಗದೊಂದಿಗೆ ಪುತ್ತೂರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.23ರಂದು ಕೊಂಬೆಟ್ಟು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಿತು.
ಕ್ರೀಡಾ ಕೂಟದ ಸಭಾ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರು ಮಾತನಾಡಿ ರಾಜ್ಯ ಮಟ್ಟದ ಕ್ರೀಡಾ ಕೂಟ ಮುಂದಿನ ದಿನ ಇಲ್ಲೇ ನಡೆಯಲಿದೆ. ಇದರ ನೇತೃತ್ವವನ್ನು ಶ್ರೀ ರಾಮಕೃಷ್ಣ ಶಾಲೆ ವಹಿಸಿ 3 ದಿನ ಕ್ರೀಡಾ ಕೂಟ ನಡೆಯಲಿದೆ ಎಂದು ಅವರು ಹೇಳಿದರು.
ನಗರಸಭೆ ಸ್ಥಳೀಯ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಧ್ವಜಾರೋಹಣ ಮಾಡಿದರು. ತಹಶೀಲ್ದಾರ್ ಶಿವಶಂಕರ್, ಯುವ ಸಬಲೀಕರಣ ಜಿಲ್ಲಾ ಸಹಾಯಕ ನಿರ್ದೇಶಕ ರವಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಎಸ್, ಶಿಕ್ಷಣ ಸಂಯೋಜ ಹರಿಪ್ರಸಾದ್, ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ರಾಜ್ಯ ಪ್ರಶಸ್ತಿ ಪುರಸ್ಕೃತ ದಯಾನಂದ ರೈ ಕೊರ್ಮಂಡ, ರಾಜ್ಯ ದೈಹಿಕ ಶಿಕ್ಷಣ ಸಂಘದ ಸೀತಾರಾಮ ರೈ ಮಿತ್ತಡ್ಕ, ಸುಳ್ಯದ ನೋಡೆಲ್ ಅಧಿಕಾರಿ ದೇವರಾಜ್ ಮುತ್ಲಾಜೆ, ಕೆಡಿಪಿ ಮಾಜಿ ಸದಸ್ಯ ಕೃಷ್ಣಪ್ರಸಾದ್ ಆಳ್ವ, ಯುವಜನ ಒಕ್ಕೂಟದ ಜಿಲ್ಲಾಧ್ಯಕ್ಷ ಮತ್ತು ರಾಜ್ಯ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಪುತ್ತೂರು ತಾಲೂಕು ಯುವಜನ ಒಕ್ಜೂಟದ ಅಧ್ಯಕ್ಷ ದಿನೇಶ್ ಸಾಲಿಯಾನ್, ಪ್ರಾಥಮಿಕ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ರೈ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗ್ರೇಡ್ 1 ಇದರ ಅಧ್ಯಕ್ಷ ಸೀತಾರಾಮ ಗೌಡ, ಗ್ರೇಡ್ ೨ ಇದರ ಅಧ್ಯಕ್ಷ ಸುಧಾಕರ್ ರೈ, ದಯಾನಂದ ರೈ, ಶ್ರೀಕೃಷ್ಣ ಯುವಕ ಮಂಡಲ, ಲಿಂಗಪ್ಪ ಗೌಡ, ಕೋಡಿಂಬಾಡಿ ಗ್ರಾ.ಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುತ್ತೂರು ಯುವಜನ ಕ್ರೀಡಾ ಸಬಲೀಕರಣ ಕ್ರೀಡಾ ಇಲಾಖೆ ಮೇಲ್ವಿಚಾರಕ ಶ್ರೀಕಾಂತ್ ಬಿರಾವು ಅತಿಥಿಗಳನ್ನು ಗೌರವಿಸಿದರು.ದಸರಾ ಕ್ರೀಡಾಕೂಟದ ಕಡಬ ಮತ್ತು ಪುತ್ತೂರು ತಾಲೂಕು ನೋಡೆಲ್ ಅಧಿಕಾರಿ ಮಾಮಚ್ಚನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಮಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಹ ಶಿಕ್ಷಕ ಬಾಲಕೃಷ್ಣ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು.