ತಾ| ಮಟ್ಟದ ಯುವ ಸಂಸತ್ತು ಸ್ಪರ್ಧೆ: ರಾಮಕುಂಜ ಕ.ಮಾ.ಪ್ರೌಢಶಾಲೆಯ ವಿದ್ಯಾರ್ಥಿನಿ ಯಶಸ್ವಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇದರ ಆಶ್ರಯದಲ್ಲಿ ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆ, ಕಾಂಚನದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಭಾಗವಹಿಸಿದ್ದ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಯಶಸ್ವಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಶಾಲಾ ಸಮಾಜ ವಿಜ್ಞಾನ ಶಿಕ್ಷಕರಾದ ದಿನೇಶ್ ಬಿ.ಅವರು ವಿದ್ಯಾರ್ಥಿಗಳನ್ನು ಸ್ಪರ್ಧೆಗೆ ತಯಾರು ಮಾಡಿ ಮಾರ್ಗದರ್ಶನ ನೀಡಿದ್ದರು. ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಗುಡ್ಡಪ್ಪ ಬಲ್ಯ, ಶಾಲಾ ಮುಖ್ಯಗುರು ಸತೀಶ್ ಭಟ್ ಹಾಗೂ ಶಿಕ್ಷಕ ವೃಂದದವರು ಸಹಕರಿಸಿದ್ದರು.

LEAVE A REPLY

Please enter your comment!
Please enter your name here