ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4ರ ಬಾಲೆ ಜಮೀಲಾ ಸನಿಕ ವಿಧಿವಶ

0

ವಿಟ್ಲ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷ ಪ್ರಾಯದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ(ಸೆ.24) ಮುಂಜಾನೆ ಮೃತಪಟ್ಟಿದ್ದಾಳೆ.
ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ, ಪುತ್ತೂರು ವಲಯ ಎಸ್‌ ಕೆ ಎಸ್‌ ಎಸ್‌ ಎಫ್‌ ವಲಯ ಅಧ್ಯಕ್ಷ ಇಬ್ರಾಹಿಂ ಬಾತಿಷಾ ಅವರ ಪುತ್ರಿ ಜಮೀಲಾ ಸನಿಕ ಮೃತ ಬಾಲಕಿ. ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್‌ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದ ಸನಿಕ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಸನಿಕ ಭಾನುವಾರ ಮುಂಜಾನೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ.

LEAVE A REPLY

Please enter your comment!
Please enter your name here