ಥ್ರೋಬಾಲ್ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಸೆ.24ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ತಾಲೂಕನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದು ಮಂಡ್ಯದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಥ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಶರತ್ ಶೆಟ್ಟಿ ಮೋಕ್ಷಿತ್ ಪಿ ಶೆಟ್ಟಿ, ಕೌಶಿಕ್, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪ್ರಜ್ವಲ್, ಗಗನ್, ಪ್ರಜ್ವಲ್, ಕಲಾ ವಿಭಾಗದ ಶಮಿತ್ ಪ್ರಸಾದ್ ಪಿ, ವಿಜ್ಞಾನ ವಿಭಾಗದ ಸುಜಿತ್, ರೋಶಿತ್ ಆರ್, ಲಕ್ಷ್ಮೀದಾಸ್ ಎನ್, ಸುಚಿತ್, ಜೀವನ್ ಕುಮಾರ್, ಭಾರ್ಗವ್ ಎಸ್ ಭಾಗವಹಿಸಿದ್ದರು. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here