ಕುಂಬ್ರ: ಮಹಿಳಾ ಜ್ಞಾನ ವಿಕಾಸ ಕೇಂದ್ರದ ಕಾರ್ಯಕ್ರಮದಡಿ ಬೀದಿ ನಾಟಕ 

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಪುತ್ತೂರು ಯೋಜನಾ ಕಛೇರಿ ವ್ಯಾಪ್ತಿಯ ಕುಂಬ್ರದಲ್ಲಿ  ಮಹಿಳಾ ಜ್ಞಾನವಿಕಾಸ ಕೇಂದ್ರದ ಕಾರ್ಯಕ್ರಮದಡಿಯಲ್ಲಿ ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಬೀದಿ ನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ನೀರಿನ ಸದ್ಬಳಕೆ, ವಾಹನ ಅಪಘಾತಗಳ ಬಗ್ಗೆ ಮುನ್ನೆಚ್ಚರಿಕೆ, ಸಂಚಾರಿ ನಿಯಮಗಳನ್ನು ಪಾಲಿಸುವ ಬಗ್ಗೆ, ಅತಿಯಾಗಿ ಮೊಬೈಲ್ ಬಳಕೆಯಿಂದಾಗುವ ಸಮಸ್ಯೆಗಳ ಬಗ್ಗೆ, ಆರೋಗ್ಯದ ಬಗ್ಗೆ, ಪ್ಲಾಸ್ಟಿಕ್ ಬಳಕೆಯಿಂದಾಗುವ ಸಮಸ್ಯೆಗಳ ಬಗ್ಗೆ “ಸಂಸಾರ ಜೋಡುಮಾರ್ಗ “ಬೀದಿನಾಟಕ ತಂಡದವರು ಬೀದಿ ನಾಟಕದ ಮೂಲಕ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯ ವಹಿಸಿದ್ದ ಕುಂಬ್ರ ವಲಯದ ವಲಯಾಧ್ಯಕ್ಷ ಎಸ್ ಮಾಧವ ರೈ ಕುಂಬ್ರ ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜ್ಞಾನವಿಕಾಸ ಕಾರ್ಯಕ್ರಮದಿಂದ ಜನರಿಗೆ ಉತ್ತಮವಾದ ಸಂದೇಶವನ್ನು ನೀಡುತ್ತಾ ಬಂದಿದೆ, ಈ ಬೀದಿ ನಾಟಕದಿಂದ ಪಡೆದ ಮಾಹಿತಿಯನ್ನು ಜನರು ತಮ್ಮ ಪ್ರತಿ ನಿತ್ಯದ ದಿನದಲ್ಲಿ ಅಳವಡಿಸಿದರೆ ಯಾವುದೇ ಸಮಸ್ಯೆಗಳು ಬರುವುದಿಲ್ಲ. ಹಾಗೂ ಈ ಕಾರ್ಯಕ್ರಮವನ್ನು ಆಯೋಜಿಸಿದಕ್ಕೆ ಖುಷಿ ಪಟ್ಟರು.

ಕಾರ್ಯಕ್ರಮದಲ್ಲಿ ಕುಂಬ್ರ ವಲಯದ ಮೇಲ್ವಿಚಾರಕರಾದ ಮೋಹಿನಿ ಎಸ್ ಗೌಡ, ತಾಲೂಕು ಜ್ಞಾನವಿಕಾಸ ಸಮನ್ವಯಧಿಕಾರಿ ಕಾವ್ಯಶ್ರೀ, ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿ ಶಶಿಕಲಾ ರೈ, ಜ್ಞಾನವಿಕಾಸ ಕೇಂದ್ರದ ಸದಸ್ಯರು ಹಾಗೂ ಒಕ್ಕೂಟದ  ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here