





ಪುತ್ತೂರು: ಬನ್ನೂರು ಕರ್ಮಲದಲ್ಲಿ ವಿದ್ಯಾರ್ಥಿನಿಯೊಬ್ಬರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.24ರಂದು ಮಧ್ಯಾಹ್ನ ಬೆಳಕಿಗೆ ಬಂದಿದೆ.
ಬನ್ನೂರು ಕರ್ಮಲ ಸನ್ನಿಧಿ ಲೇ ಔಟ್ ನಿವಾಸಿ ಕಿಶೋರ್ ಎಂಬುವರ ಪುತ್ರಿ ವಿವೇಕಾನಂದ ಕಾಲೇಜಿನ ಅಂತಿಮ ಬಿ.ಸಿ.ಎ ವಿದ್ಯಾರ್ಥಿನಿ ಕೀರ್ತಿಕಾ(19ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಅವರು ಮನೆಯ ಒಳಗೆ ಸೀಲಿಂಗ್ ಫ್ಯಾನ್‌ಗೆ ಬೆಡ್‌ಶೀಟ್ ಸುತ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ತಂದೆ ಕಿಶೋರ್, ತಾಯಿ, ಸಹೋದರನನ್ನು ಅಗಲಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.











