ಕಾಂಚನ: ತಾಲೂಕು ಮಟ್ಟದ ಯುವ ಸಂಸತ್ತು ಸ್ಪರ್ಧೆ

0

ನೆಲ್ಯಾಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗೊಳಪಟ್ಟ ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಪುತ್ತೂರು ಇದರ ವತಿಯಿಂದ ತಾಲೂಕು ಮಟ್ಟದ ಯುವ ಸಂಸತ್ತು ಸ್ಪರ್ಧೆ ಜರುಗಿತು.
ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ರವರು ಉದ್ಘಾಟಿಸಿ ಮಾತನಾಡಿ, ವಿಶ್ವೇಶ್ವರಯ್ಯ ಅವರ ಸಾಧನೆಗಳನ್ನು ಸ್ಮರಿಸಿ, ಇಂದಿನ ಮಕ್ಕಳು ಭವಿಷ್ಯದಲ್ಲಿ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸಲಿರುವಿರಿ. ಎಳೆವೆಯಲ್ಲಿ ವಿದ್ಯಾರ್ಥಿಗಳಲ್ಲಿ ಆ ಜ್ಞಾನವನ್ನು ಮೂಡಿಸುವ ಸಲುವಾಗಿ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿ ಶುಭ ಹಾರೈಸಿದರು. ಅತಿಥಿಯಾಗಿದ್ದ ಕಡಬ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಾಂತರಾಮ ಓಡ್ಲರವರು, ಯುವ ಸಂಸತ್ತಿನ ಸ್ಪರ್ಧೆಯ ಕುರಿತು ತಿಳಿಸಿದರು. ಶಿಕ್ಷಣ ಸಂಯೋಜಕ ಹರಿಪ್ರಸಾದ್, ತೀರ್ಪುಗಾರರಾಗಿ ಆಗಮಿಸಿದ ರಾಮಕುಂಜ ಪದವಿಪೂರ್ವ ಕಾಲೇಜು ಉಪನ್ಯಾಸಕ ಗುಡ್ಡಪ್ಪ ಬಲ್ಯ, ಸಂಪನ್ಮೂಲ ವ್ಯಕ್ತಿ ವಿಜಯಕುಮಾರ್, ಬಜತ್ತೂರು ಕ್ಲಸ್ಟರ್ ಸಿಆರ್‌ಪಿ ಮಂಜುನಾಥ್, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ನಯನ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶಾಲಾ ಮುಖ್ಯಗುರು ರಮೇಶ್ ಮಯ್ಯರವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. 9ನೇ ತರಗತಿಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಮಂಜುಳಾ ಕಾರ್ಯಕ್ರಮ ನಿರೂಪಿಸಿ, ವಿಜಯಲಕ್ಷ್ಮಿ ವಂದಿಸಿದರು. ನಂತರ ನಡೆದ ಸ್ಪರ್ಧೆಯಲ್ಲಿ ಒಟ್ಟು ಆರು ಶಾಲೆಗಳ ವಿದ್ಯಾರ್ಥಿಗಳ ತಂಡ ಅಧಿವೇಶನದಲ್ಲಿ ಭಾಗವಹಿಸಿ ಪ್ರತಿಕ್ರಿಯಾತ್ಮಕವಾಗಿ ಅಧಿವೇಶನ ನಡೆಸಿದರು. ಇದರಲ್ಲಿ ಒಟ್ಟು ಐದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ತೀರ್ಪುಗಾರ ಗುಡ್ಡಪ್ಪರವರು ಮಕ್ಕಳು ಜಿಲ್ಲಾಮಟ್ಟದಲ್ಲಿ ಭಾಗವಹಿಸಲು ಯಾವ ರೀತಿ ತಯಾರಿಗಳನ್ನು ನಡೆಸಿಕೊಳ್ಳಬೇಕು ಎಂಬುದನ್ನು ತಿಳಿಸಿದರು.
ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಐದು ವಿದ್ಯಾರ್ಥಿಗಳಿಗೆ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು. ಪುತ್ತೂರು ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಲಲಿತಾರವರು ಸಮಾರೋಪ ಭಾಷಣವನ್ನು ಮಾಡಿದರು. ತೀರ್ಪುಗಾರರಾದ ಗುಡ್ಡಪ್ಪ, ವಿಜಯ್ ಕುಮಾರ್ ಮತ್ತು ಶಾಲಾ ಮುಖ್ಯಗುರು ರಮೇಶ್ ಮಯ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಜಾತ ನಿರ್ವಹಿಸಿದರು. ಜಯಲಕ್ಷ್ಮಿ ಸ್ವಾಗತಿಸಿ, ತ್ರಿವೇಣಿ ವಂದಿಸಿದರು.

LEAVE A REPLY

Please enter your comment!
Please enter your name here