ಪುಣಚ ಕಲ್ಪವೃಕ್ಷ ಫ್ರೆಂಡ್ಸ್ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ

0

ಪುಣಚ: ಪುಣಚ ಕಲ್ಪವೃಕ್ಷ ಫ್ರೆಂಡ್ಸ್ ವತಿಯಿಂದ ನೀಡಲಾದ ಆಂಬುಲೆನ್ಸ್ ನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಪುಣಚ ಗ್ರಾ.ಪಂ.ಅಧ್ಯಕ್ಷೆ ಬೇಬಿಯವರು ಪುಣಚ ಪರಿಯಾಲ್ತಡ್ಕದಲ್ಲಿ ಸೆ.25ರಂದು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಪುಣಚ ಗ್ರಾಮದಲ್ಲಿ ಕಲ್ಪವೃಕ್ಷ ಫ್ರೆಂಡ್ಸ್ ಯುವಕರ ತಂಡ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿರುವುದು ಸಂತಸದ ವಿಷಯ. ಮುಂದೆಯೂ ಇನ್ನಷ್ಟು ಉತ್ತಮ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದರು.
ಪುಣಚ ಜುಮ್ಮಾ ಮಸೀದಿ ಧರ್ಮಗುರು ಅಬೂಬಕ್ಕರ್ ಸಿದ್ದಿಕ್ ರಝ್ವಿ, ಪುಣಚ ಮನೆಲಾ ಕ್ರೈಸ್ತ ರಾಜ ಚರ್ಚ್’ನ ಫಾದರ್ ನೆಲ್ಸನ್ ಒಲಿವೆರಾ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ.ಎಸ್ ಮಹಮ್ಮದ್, ಪುಣಚ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜನಾರ್ಧನ ಭಟ್ ಮಾತನಾಡಿ ಶುಭ ಹಾರೈಸಿದರು. ಪುಣಚ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರವಿ, ಪುಣಚ ಗ್ರಾಂ.ಪಂ.ಉಪಾಧ್ಯಕ್ಷ ಮಹೇಶ್ ಶೆಟ್ಟಿ ಬೈಲುಗುತ್ತು, ಪುಣಚ ಗ್ರಾ.ಪಂ. ಸದಸ್ಯ ಉದಯಕುಮಾರ್ ದಂಬೆ, ಪುಣಚ ತನ್ವಿ ಕ್ಲಿನಿಕ್ ನ ಡಾ.ಪ್ರದೀಪ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪುಣಚ ಗ್ರಾ.ಪಂ ಸದಸ್ಯ ಉದಯ ಕುಮಾರ್ ಸ್ವಾಗತಿಸಿ, ಮಾಜಿ ಅಧ್ಯಕ್ಷ ರಾಮಕೃಷ್ಣ ಬಿ , ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಪುಣಚ ಕಲ್ಪವೃಕ್ಷ ಫ್ರೆಂಡ್ಸ್ ನ ಪದಾಧಿಕಾರಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here