ಸೆ 26:ಬೆಳಂದೂರು ಗ್ರಾಮ ಸಭೆ

0

ಕಾಣಿಯೂರು: ಬೆಳಂದೂರು ಗ್ರಾ.ಪಂ ವ್ಯಾಪ್ತಿಯ ಬೆಳಂದೂರು, ಕುದ್ಮಾರು, ಕಾಯಿಮಣ ಗ್ರಾಮಗಳ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಸೆ. 26ರಂದು ಪಳ್ಳತ್ತಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾ.ಪಂ ಅಧ್ಯಕ್ಷೆ ಪಾರ್ವತಿ ಮರಕ್ಕಡ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರು ಚರ್ಚಾ ನಿಯಂತ್ರಣಾಧಿಕಾರಿಯಾಗಿ ಭಾಗವಹಿಸಲಿದ್ದು, ಗ್ರಾಮ ಪಂಚಾಯತ್ ಕ್ಷೇತ್ರಕ್ಕೆ ಒಳಪಟ್ಟ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸಿ, ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸೂಕ್ತ ಸಲಹೆ- ಸೂಚನೆಗಳನ್ನು ನೀಡುವಂತೆ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ್ ಕೆ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here