ಕುಂಬ್ರ: ಬಾಲಕಿಯರ ವಾಲಿಬಾಲ್ ಪಂದ್ಯಾಟ-ಕೆಪಿಎಸ್ ಕುಂಬ್ರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಮಂಗಳೂರು ಮತ್ತು ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜು, ಉಪ್ಪಿನಂಗಡಿ ಇದರ ಆಶ್ರಯದಲ್ಲಿ ಸೆ. 22 ರಂದು ಉಪ್ಪಿನಂಗಡಿಯಲ್ಲಿ ನಡೆದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕೆ.ಪಿ.ಎಸ್ ಕುಂಬ್ರ ಇದರ ಪದವಿ ವೂರ್ವ ವಿಭಾಗದ ವಿದ್ಯಾರ್ಥಿನಿಯರು ಫೈನಲ್‌ನಲ್ಲಿ ಸಂತ ಫಿಲೋಮಿನ ಕಾಲೇಜಿನ ವಿದ್ಯಾರ್ಥಿನಿಯರ ತಂಡವನ್ನು ಎದುರಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡು ಸೆ. 25 ರಂದು ಸುಬ್ರಮಣ್ಯ ಪ.ಪೂ ಕಾಲೇಜಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಟೀಂ ವ್ಯವಸ್ಥಾಪಕ ಯತೀಶ್ ಕುಮಾರ್ ಬಿ.ಕೆ , ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ರಸಾದ್ ಮತ್ತು ಕೋಚ್‌ಗಳಾದ ಇರ್ಷಾದ್, ಮನೋಜ್ ತರಬೇತು ನೀಡಿದ್ದರು ಎಂದು ಕಾಲೇಜಿನ ಪ್ರಾಂಶುಪಾಲರು, ಕಾರ್ಯಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here