ಕಾಣಿಯೂರು: ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ಮೋಹನ್ ಕೊಠಾರಿ ಅವರು ಸೆ.25ರಂದು ಅಧಿಕಾರ ಸ್ವೀಕರಿಸಿದ್ದಾರೆ. ಸುಳ್ಯದಿಂದ ವರ್ಗಾವಣೆ ಆದೇಶವಾಗಿರುವ ನವೀನ್ ಚಂದ್ರ ಜೋಗಿ ಅವರು ಅಧಿಕಾರ ಹಸ್ತಾಂತರಿಸಿದರು. ಮಂಗಳೂರಿನವರಾದ ಮೋಹನ್ ಕೊಠಾರಿ ಅವರನ್ನು ಸುಳ್ಯ ವೃತ್ತ ನಿರೀಕ್ಷಕರಾಗಿ ನೇಮಕ ಮಾಡಿ ಸರಕಾರ ಆದೇಶ ಮಾಡಿತ್ತು. ಕಳೆದ ಮೂರುವರೆ ವರ್ಷದಿಂದ ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅವರಿಗೆ ರಾಜ್ಯ ಪೊಲೀಸ್ ಗುಪ್ತಚರ ವಿಭಾಗಕ್ಕೆ ವರ್ಗಾವಣೆ ಆಗಿದೆ.