ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯ ಸೌಲಭ್ಯಕ್ಕೆ ನಿರ್ವಾಹಕರು ಹಾಗೂ ಕ್ಲೀನರ್‌ಗಳ ನೋಂದಣಿಗಾಗಿ ಮನವಿ

0

ಕಾಣಿಯೂರು :ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಯನ್ನು ನಿರ್ವಾಹಕರು ಮತ್ತು ಕ್ಲೀನರ್‌ಗಳಿಗೂ ಅನ್ವಯಿಸುವಂತೆ ಜಾರಿಗೊಳಿಸಿದ್ದು, ದ.ಕ ಮಂಗಳೂರು ಜಿಲ್ಲೆಯ ಖಾಸಗಿ ವಾಣಿಜ್ಯ ಸಾರಿಗೆ ವಾಹನಗಳ ನಿರ್ವಾಹಕರು,ಕ್ಲೀನರ್‌ಗಳು ನೋಂದಣಿ ಮಾಡಿಸುವಂತೆ ಕಾರ್ಮಿಕ ಇಲಾಖೆ ತಿಳಿಸಿದೆ.


ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಖಾಸಗಿ ವಾಣಿಜ್ಯ ವಾಹನಗಳ ಚಾಲಕರಿಗಾಗಿ ಜಾರಿಗೊಳಿಸುತ್ತಿರುವ ಅಪಘಾತ ಪರಿಹಾರ ಯೋಜನೆಯಾದ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಯನ್ನು ನಿರ್ವಾಹಕರು ಮತ್ತು ಕ್ಲೀನರ್‌ಗಳಿಗೂ ಅನ್ವಯಿಸುವಂತೆ ಜಾರಿಗೊಳಿಸಿದೆ. ಈ ಯೋಜನೆಯಡಿ ಖಾಸಗಿ ವಾಣಿಜ್ಯ ವಾಹನ ನಿರ್ವಾಹಕರು ಮತ್ತು ಕ್ಲೀನರ್‌ಗಳು ನೋಂದಣಿಯಾಗಲು ಜಿಲ್ಲಾ ಕಾರ್ಮಿಕ ಅಧಿಕಾರಿ ಕಛೇರಿಗೆ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಕಾರ್ಮಿಕ ಅಧಿಕಾರಿಯವರ ಕಛೇರಿ,ಕಾರ್ಮಿಕ ನಿರೀಕ್ಷಕರುಗಳ ಕಛೇರಿಯನ್ನುಸಂಪರ್ಕಿಸಬಹು ಎಂದು
ದ.ಕ ಮಂಗಳೂರು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಉಪವಿಭಾಗ-1, ಕಾವೇರಿ.ಟಿ ಹಾಗೂ ಉಪವಿಭಾಗ-2 ವಿಲ್ಮಾ ಎಲಿಜಬೆತ್ ತಾವ್ರೋ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here