ಇಂದ್ರಪ್ರಸ್ಥದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

0

ಉಪ್ಪಿನಂಗಡಿ: ಕರ್ಣಾಟಕ ಬ್ಯಾಂಕ್ ಪುತ್ತೂರು ಶಾಖೆಯ ಸಹಯೋಗದೊಂದಿಗೆ ಪುತ್ತೂರು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಇಲ್ಲಿನ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಕರ್ಣಾಟಕ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕ ಶ್ರೀಶ ಕೆ. ಕ್ರೀಡಾಕೂಟ ಉದ್ಘಾಟಿಸಿದರು. ಬಾಲಕರ ವಿಭಾಗದಲ್ಲಿ 11 ತಂಡಗಳು ಹಾಗೂ ಬಾಲಕಿಯರ ವಿಭಾಗದಲ್ಲಿ 4 ತಂಡಗಳು ಭಾಗವಹಿಸಿದ್ದವು. ಬಾಲಕರ ವಿಭಾಗದಲ್ಲಿ ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜು ಪ್ರಥಮ ಹಾಗೂ ಕೊಂಬೆಟ್ಟುವಿನ ಸರಕಾರಿ ಪದವಿಪೂರ್ವ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಕುಂಬ್ರ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಥಮ ಹಾಗೂ ಸೈಂಟ್ ಫಿಲೋಮಿನಾ ಕಾಲೇಜು ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡವು.
ಕ್ರೀಡಾಕೂಟದ ಆಯೋಜಕರಾಗಿ ದೈಹಿಕ ಶಿಕ್ಷಣ ಶಿಕ್ಷಕರಾದ ಪುನೀತ್ ಕೆ., ಮೋನಪ್ಪ ಎಂ. ಪಟ್ಟೆ ಕಾರ್ಯನಿರ್ವಹಿಸಿದರು. ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಸಹಕರಿಸಿದರು.

LEAVE A REPLY

Please enter your comment!
Please enter your name here