ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನ 2023-24 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಸೆ.27 ರಂದು ಬೆಳಿಗ್ಗೆ ಕುಂಬ್ರ ನವೋದಯ ರೈತ ಸಭಾಭವನದಲ್ಲಿ ನಡೆಯಲಿದೆ. ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಗೆ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಯವರು ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಲಿದ್ದಾರೆ.
ಗ್ರಾಮದ ಸರ್ವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಗ್ರಾಮದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆಗಳನ್ನು ಕೊಡಬೇಕು ಹಾಗೂ ಸರಕಾರದ ಸೌಲಭ್ಯಗಳನ್ನು ಪಡೆಯಲು ಅರ್ಜಿ ಸಲ್ಲಿಸುವಂತೆ ಗ್ರಾಪಂ ಪ್ರಭಾರ ಅಭಿವೃದ್ಧಿ ಅಧಿಕಾರಿ ನಮಿತಾ ಕೆ, ಕಾರ್ಯದರ್ಶಿ ಜಯಂತಿ, ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ ಹಾಗೂ ಸರ್ವ ಸದಸ್ಯರುಗಳು ಹಾಗೂ ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ. ಪಂಚಾಯತ್‌ಗೆ ಪಾವತಿಸಬೇಕಾದ ವ್ಯಾಪಾರ ಪರವಾನಿಗೆ, ಕಟ್ಟಡ ತೆರಿಗೆ, ನೀರಿನ ಶುಲ್ಕಗಳನ್ನು ಪಾವತಿಸುವಂತೆ ಗ್ರಾಪಂ ಪ್ರಕಟಣೆ ತಿಳಿಸಿದೆ.