ನರೇಂದ್ರ ಪ.ಪೂ.ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ‍್ಯಕ್ರಮ

0

ಪುತ್ತೂರು: ಸ್ವಾಸ್ಥ್ಯ ಸಂಕಲ್ಪ ಸಮಾಜದಲ್ಲಿ ಮಾದಕ ವ್ಯಸನಕ್ಕೆ ಮಕ್ಕಳು ತುತ್ತಾಗದಂತೆ ಇರಬೇಕಾದರೆ ಪೋ?ಕರು, ಶಾಲೆ, ಕಾಲೇಜುಗಳಲ್ಲಿ ಶಿಕ್ಷಕರು ಹೆಚ್ಚಿನ ಪಾತ್ರ ವಹಿಸಬೇಕಾಗುತ್ತದೆ.ವಿದ್ಯಾರ್ಥಿಗಳಿಗೆ ಹದಿಹರೆಯದಲ್ಲಿ ಮಾನಸಿಕ, ದೈಹಿಕ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಬೇಕಾಗುತ್ತದೆ.ಅವರ ಬದುಕಿನಲ್ಲಿ ಸೋಲು, ವೈಫಲ್ಯದ ಸಂದರ್ಭದಲ್ಲಿ ಅವರ ಮೇಲಿನ ಒತ್ತಡ ನಿವಾರಣೆಗೆ ಸೂಕ್ತ ಮಾರ್ಗದರ್ಶನ ನೀಡುವ ಕೆಲಸ ಆಗಬೇಕಾಗಿದೆ ಎಂದು ಲಿಟಲ್ ಫ್ಲವರ್ ಶಾಲೆಯ ಶಿಕ್ಷಕರಾದ ಬಾಲಕೃಷ್ಣ ಪೊರ್ದಾಳ್ ರವರು ಹೇಳಿದರು.

ನರೇಂದ್ರ ಪ.ಪೂ,ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ಆಯೋಜಿಸಲಾದ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಶ್ರೀ ಕ್ಷೇತ್ರ ಧರ್ಮಸ್ಥಳ, ಪುತ್ತೂರು ತಾಲೂಕು ಸಮಿತಿ ಇದರ ವತಿಯಿಂದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ‍್ಯಕ್ರಮ ಸ್ವಾಸ್ಥ್ಯ ಸಂಕಲ್ಪ ದಲ್ಲಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ಜಿಲ್ಲಾಧ್ಯಕ್ಷರಾದ ಪದ್ಮನಾಭ ಶೆಟ್ಟಿ ರವರು ಕಾರ‍್ಯಕ್ರಮವನ್ನು ಉದ್ಘಾಟಿಸಿದರು.

ಡ್ರಗ್ಸ್ ಮಾಫಿಯಾದ ಚಟುವಟಿಕೆಗಳನ್ನು ನಿಯಂತ್ರಿಸಲು ಸಾಮೂಹಿಕ ಪ್ರಯತ್ನ ಸಾಗಬೇಕಾಗಿದೆ. ಪ್ರಸಕ್ತ ವೇಗದ ಬದುಕಿನಲ್ಲಿ ಒತ್ತಡವೂ ಹೆಚ್ಚುತ್ತಿದೆ. ಈ ಒತ್ತಡ ನಿವಾರಣೆಗೆ ಕೆಲವರು ಮಾದಕ ವ್ಯಸನಿಗಳಾಗುತ್ತಾರೆ ಎನ್ನುವ ಅಭಿಪ್ರಾಯವಿದೆ. ಸಮಾಜದಲ್ಲಿ ಒತ್ತಡ ನಿವಾರಣೆಗೆ ಈ ರೀತಿಯ ತಪ್ಪು ಹಾದಿಗಳಲ್ಲಿ ಸಾಗಲು ಪ್ರೇರೇಪಣೆ ನೀಡುವವರ ಬಗ್ಗೆ ಗಮನಹರಿಸಬೇಕಾಗಿದೆ.ನಮ್ಮ ಸಂಸ್ಕೃತಿಯಲ್ಲಿ ಒತ್ತಡ ನಿವಾರಣೆಗೆ ಯೋಗ ಧ್ಯಾನದಂತಹ ವಿವಿಧ ಮಾರ್ಗವನ್ನು ಅನುಸರಿಸುವ ಹಾಗೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಬೇಕಾಗಿದೆ.ಎಂದು ಹೇಳಿದರು.

ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ರವರು ಮಾತನಾಡುತ್ತಾ ಜನ ಜಾಗೃತಿ ವೇದಿಕೆಯು ರಾಜ್ಯಾದ್ಯಂತ ತಂಬಾಕು ಮತ್ತು ಮಾದಕ ದ್ರವ್ಯಗಳ ದು?ರಿಣಾಮಗಳ ಕುರಿತು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.ಮಾದಕದ್ರವ್ಯ ವ್ಯಸನ ತಡೆಗಟ್ಟಲು ಸಮಾಜದ ವಿವಿಧ ಸ್ತರಗಳ ಜನರು ಇದೊಂದು ಸಾಮಾಜಿಕ ಹೊಣೆಗಾರಿಕೆಯೆಂದು ಭಾವಿಸಿ ಒಂದಾಗಿ ಕೈ ಜೋಡಿಸಿದಾಗ ಯಶಸ್ಸು ಗಳಿಸಬಹುದು. ಎಂದು ಹೇಳಿದರು.

ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ,ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ತಾಲೂಕು ಅಧ್ಯಕ್ಷ ಲೋಕೇಶ ಹೆಗ್ಡೆ, ವಲಯ ಅಧ್ಯಕ್ಷ ಸತೀಶ್ ನಾಯ್ಕ್ ಪರ್ಲಡ್ಕ,ವಲಯ ಮೇಲ್ವಿಚಾರಕರಾದ ಶೃತಿ ಉಪಸ್ಥಿತರಿದ್ದರು. ಮತ್ತು ತಾಲೂಕು ಸಮಿತಿಯ ಸದಸ್ಯರು ಭಾಗವಹಿಸಿದ್ದರು.
ಕಾರ‍್ಯಕ್ರಮದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಕು. ಸಿಂಚನಾ ಬಿ. ಸ್ವಾಗತಿಸಿ,ವಂದಿಸಿದರು.

LEAVE A REPLY

Please enter your comment!
Please enter your name here