ವಿದ್ಯಾಮಾತಾ ಅಕಾಡೆಮಿಯ ಮೊದಲ ಶಾಖೆ ಸುಳ್ಯದಲ್ಲಿ ನಾಳೆ ಶುಭಾರಂಭ

0

ಪುತ್ತೂರು: ಭಾರತ ಸರಕಾರದ ಮಾನ್ಯತೆ ಪಡೆದಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ ಇದರ ಚೊಚ್ಚಲ ಶಾಖೆ ಸೆ. 28 ರಂದು ಸುಳ್ಯ ರಥಬೀದಿಯಲ್ಲಿನ ಟಿ.ಎ.ಪಿ.ಸಿ.ಎಂ.ಎಸ್. ಸಂಕೀರ್ಣದಲ್ಲಿ ಶುಭಾರಂಭಗೊಳ್ಳಲಿದೆ. ವಿದ್ಯಾಮಾತಾ ಇದರ ಮಾತೃ ಸಂಸ್ಥೆ ವಿದ್ಯಾಮಾತಾ ಫೌಂಡೇಶನ್ ಈಗಾಗಲೇ 3 ರಾಜ್ಯಮಟ್ಟದ ಉದ್ಯೋಗ ಮೇಳ, ಸುಮಾರು 500ಕ್ಕೂ ಹೆಚ್ಚು ನೇರ ಉದ್ಯೋಗ ಸಂದರ್ಶನಗಳ ಮೂಲಕ 5000ಕ್ಕೂ ಮಿಕ್ಕಿದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವಲ್ಲಿ ಸಫಲತೆ ಕಂಡಿದೆ. ಕರಾವಳಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮತ್ತು ತರಬೇತಿ ನೀಡಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸರಕಾರಿ ಹಾಗೂ ಸರಕಾರಿ ಸ್ವಾಮ್ಯದ ಇಲಾಖೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳುವಲ್ಲೂ ಸಂಸ್ಥೆಯ ಶ್ರಮದ ಜೊತೆಗೆ ವಿದ್ಯಾರ್ಥಿಗಳ ಪ್ರಯತ್ನ ಸಾಕಷ್ಟಿದೆ.

ಅಕಾಡೆಮಿಯ ವೈಶಿಷ್ಟ್ಯತೆಗಳು: 20 ಕ್ಕೂ ಹೆಚ್ಚೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 6ತಿಂಗಳ ಅವಧಿಯಲ್ಲಿ ಏಕಕಾಲದಲ್ಲಿ ತರಬೇತಿ ಪಡೆಯುವ ಅವಕಾಶ. ಸದ್ಯ ಓದುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗದಲ್ಲಿರುವವರಿಗೆ ಅನುಕೂಲವಾಗುವಂತೆ ದಿನನಿತ್ಯ ಆನ್ಲೈನ್ ಮುಖಾಂತರವೂ ತರಬೇತಿಗೆ ಅವಕಾಶ. ನೇರ ತರಗತಿಗಳಲ್ಲಿ ಪಾಲ್ಗೊಳ್ಳುವವರಿಗೆ ವಾರದ 5 ದಿನ , ಆರು ತಿಂಗಳ ತರಬೇತಿ. ತರಬೇತಿ ಬಳಿಕ ಎರಡು ವರ್ಷಗಳು ನಿರಂತರವಾಗಿ ಅರ್ಜಿ ಸಲ್ಲಿಕೆ, ಪ್ರವೇಶ ಪತ್ರ, ವಿಶೇಷ ತರಗತಿಗಳನ್ನು ಉಚಿತವಾಗಿ ನೀಡುವ ಮುಖಾಂತರ ಸರಕಾರಿ ಹುದ್ದೆಗೆ ಆಯ್ಕೆಯಾಗಲು ಸಂಪೂರ್ಣವಾಗಿ ವಿದ್ಯಾಮಾತಾ ಅಕಾಡೆಮಿಯು ಬೆಂಬಲ. ಅಭ್ಯರ್ಥಿಗಳಿಗೆ ಉಚಿತ ಕಂಪ್ಯೂಟರ್, ಸ್ಪೋಕನ್ ಇಂಗ್ಲೀಷ್, ದೈಹಿಕ ಸದೃಢತೆಯ ಮೈದಾನ ತರಬೇತಿ. ಅಧಿಕಾರಿ, ನಿವೃತ್ತರು, ದೇಶದ ಬೇರೆ ಬೇರೆ ಭಾಗಗಳ ವಿಶೇಷ ಸಂಪನ್ಮೂಲ ವ್ಯಕ್ತಿಗಳ ಮೂಲಕ ನಿರಂತರ ತರಬೇತಿ ಕಾರ್ಯಾಗಾರ. ಪ್ರತಿವಾರ ಅಣಕು ಪರೀಕ್ಷೆ, ಹಳೆಯ ಪ್ರಶ್ನೆ ಪತ್ರಿಕೆಗಳ ಪುನರ್ ವಿಮರ್ಶೆಯ ಮೂಲಕ ತರಬೇತಿಗೊಳಿಸುವುದು. ದೇಶ – ವಿದೇಶಗಳಲ್ಲಿ ಉತ್ತಮ ಕಂಪನಿ ಉದ್ಯೋಗಕ್ಕಾಗಿ ಪ್ರಯತ್ನಿಸುವವರಿಗೆ ಡಿಪ್ಲೊಮಾ ಇನ್ ಪ್ರಾಕ್ಟಿಕಲ್ ಅಕೌಂಟಿಂಗ್ ಆಂಡ್ ಟ್ಯಾಕ್ಸೇಶನ್ ಕೋರ್ಸ್‌ಗಳನ್ನು ನೀಡಲಾಗುತ್ತದೆ.
ಇವೆಲ್ಲಾ ಸೌಲಭ್ಯಗಳನ್ನು ಒಂದೇ ಸೂರಿನಡಿಯಲ್ಲಿ ಪಡೆಯುವ ಅವಕಾಶವನ್ನೂ ವಿದ್ಯಾಮಾತಾ ಒದಗಿಸಿಕೊಡುತ್ತಿದ್ದು, ಸುಳ್ಯ, ಕೊಡಗು, ಮಡಿಕೇರಿ ಸಹಿತ ವಿವಿಧ ತಾಲೂಕು ಹಾಗು ಜಿಲ್ಲೆಯ, ಕರಾವಳಿ ಭಾಗದ ವಿದ್ಯಾರ್ಥಿಗಳು ಸರಕಾರಿ, ಸರಕಾರಿ ಸ್ವಾಮ್ಯದ ಇಲಾಖೆಗಳಲ್ಲಿ ಉದ್ಯೋಗ ಪಡೆಯಲು ತಯಾರಿ ಮಾಡುವುದು ಹಾಗೂ ಸರಕಾರಿ ಹುದ್ದೆಗೆ ಆಯ್ಕೆಯಾಗದೆ ಇರುವವರನ್ನು ಖಾಸಗಿ ವಲಯದಲ್ಲಿ ಉದ್ಯೋಗಕ್ಕೆ ಅಣಿಗೊಳಿಸುವುದು ವಿದ್ಯಾಮಾತಾ ಅಕಾಡೆಮಿಯ ಮುಖ್ಯ ಧ್ಯೇಯವಾಗಿದೆ. ವಿವರಗಳಿಗೆ ಮೊಬೈಲ್ ಸಂಖ್ಯೆ 9620468869 ಸಂಪರ್ಕಿಸುವಂತೆ ಸಂಸ್ಥೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here