ಕಡಬ :ಸುಳ್ಯ ಶಾಸಕರಿಂದ ಅಹವಾಲು ಸ್ವೀಕಾರ

0

ಕಡಬ: ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮಾಡಿ ಅಹವಾಲು ಸ್ವೀಕರಿಸಿದರು.
ಸಾರ್ವಜನಿಕರು ವಿವಿಧ ಬೇಡಿಕೆಗಳ ಅಹವಾಲು ಸಲ್ಲಿಸಿದರು. ಅಕ್ರಮ ಸಕ್ರಮ ಮಂಜೂರು, ಧಾರ್ಮಿಕ ಕ್ಷೇತ್ರ, ಗ್ರಾಮೀಣ ರಸ್ತೆಗೆ ಅನುದಾನ, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಚಿಕಿತ್ಸೆ ಹಾಗೂ ಮತ್ತಿತರ ಸಾರ್ವಜನಿಕ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದರು. ವಿವಿಧ ವೈಯುಕ್ತಿಕ ಬೇಡಿಕೆಗಳ ಬಗ್ಗೆಯೂ ಮನವಿ ಸಲ್ಲಿಸಿದರು. ಮನವಿ ಪರಿಶೀಲಿಸಿದ ಶಾಸಕರು ಆದಷ್ಟು ಶೀಘ್ರವಾಗಿ ಸಾರ್ವಜನಿಕರ ಸಮಸ್ಯೆಗಳನ್ನು ಸರಿಪಡಿಸಿಕೊಡಬೇಕಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಡಬ ತಹಸೀಲ್ದಾರ್ ಪ್ರಭಾಕರ್ ಕಜೂರೆ, ಡಿ.ಟಿ. ಮನೋಹರ್, ಕಡಬ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಸುಚಿತ್ರ ರಾವ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here