ಪುತ್ತೂರು: ಪಂಚಾಯತ್ ರಾಜ್ ಇಲಾಖೆ 2022-23ನೇ ಸಾಲಿನ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಪುತ್ತೂರು ತಾಲೂಕಿನಿಂದ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಆಯ್ಕೆಯಾಗಿರುವುದಕ್ಕೆ ಭಾರೀ ಖುಷಿಯಾಗಿದೆ ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಹೇಳಿದ್ದಾರೆ.
ಗ್ರಾಮ ಪಂಚಾಯತುಗಳು ಸ್ಥಳೀಯ ಮಟ್ಟದಲ್ಲಿ ಸ್ವಯಂ ಆಡಳಿತ ಸಂಸ್ಥೆಗಳಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕೆಂಬ ಉದ್ದೇಶದಿಂದ ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಗ್ರಾಮ ಪಂಚಾಯತ್‌ಗಳಿಗೆ ಪ್ರತಿ ವರ್ಷ ಗಾಂಧಿ ಜಯಂತಿಯಂದು ತಾಲೂಕಿಗೆ ಒಂದರಂತೆ ರಾಜ್ಯ ಸರ್ಕಾರದಿಂದ ಗಾಂಧಿ ಗ್ರಾಮ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ.ವಿವಿಧ ಮಾನದಂಡಗಳ ಆಧಾರದಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತಿದ್ದು ಈ ಬಾರಿ ನಮ್ಮ ಉಪ್ಪಿನಂಗಡಿ ಗ್ರಾ.ಪಂ.ಪ್ರಶಸ್ತಿಗೆ ಆಯ್ಕೆಯಾಗಿರುವುದು ಭಾರೀ ಖುಷಿಯಾಗಿದೆ.ಜೊತೆಗೆ ಗ್ರಾಮ ಪಂಚಾಯತ್‌ಗೆ ಜನರ ಸೇವೆಯೊಂದಿಗೆ ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಹೆಚ್ಚಿನ ಅಭಿವೃದ್ಧಿ ಕೆಲಸಗಳಿಗೆ ಪೇರೇಪಣೆಯಾಗಿದೆ.ಈ ನಿಟ್ಟಿನಲ್ಲಿ ಪ್ರಶಸ್ತಿ ಬರಲು ಕಾರಣಕರ್ತರಾದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಹೇಳಿದ್ದಾರೆ.